ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಕಟ್ಟಡ ಉದ್ಘಾಟನೆ.

ಕುಂದಾಪುರ: ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಅದರ ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಾವುಂದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತಲೂ ಉತ್ತಮ ರೀತಿಯಲ್ಲಿ ಜನರಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುವುದರ ಮುಖೇನ ಜನಸ್ನೇಹಿ ಆಗಿರುವ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು.ಸಂಘದ ಸದಸ್ಯರಿಗೆ ಹಾಗೂ ಕೃಷಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದರ ಜತೆಗೆ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ.ಸಹಕಾರಿ ಕ್ಷೇತ್ರದಲ್ಲಿ ತನ್ನದೆ ರೀತಿಯಲ್ಲಿ ಹೆಸರನ್ನು […]

ಬೈಂದೂರು: ಮಹಿಳೆ ನಾಪತ್ತೆ

ಬೈಂದೂರು, ಜೂನ್ 20: ನಾವುಂದ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪದ್ಮಾವತಿ (37) ಎಂಬ ಮಹಿಳೆಯು ಮೇ 25 ರಂದು ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಮೊ.ನಂ:9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಗೆ ರಾಷ್ಟ್ರ ಮಟ್ಟದ ಎತ್ತರ ಜಿಗಿತದಲ್ಲಿ 6ನೇ ಸ್ಥಾನ.

ಕುಂದಾಪುರ: ಜೂನ್16 ಮತ್ತು 17 ರಂದು ಛತ್ತೀಸ್‌ಗಢನಲ್ಲಿ ನಡೆದ ರಾಷ್ಟ್ರಮಟ್ಟದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ 6 ನೇ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ: ಜೂನ್ 21 ರಂದು ನೇರ ಸಂದರ್ಶನ

ಉಡುಪಿ: ಜೂನ್ 21 ರಂದು ಬೆಳಗ್ಗೆ 10.30 ಕ್ಕೆ ಎಸ್.ಬಿ.ಐ ಲೈಫ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, 2ನೇ ಮಹಡಿ, ಮೆಡಿಕೇರ್ ಸೆಂಟರ್ ಬಿಲ್ಡಿಂಗ್, ಕೋರ್ಟ್ ಹಿಂದಿನ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ […]

ಜೂನ್ 21: ಉಡುಪಿ ಅಜ್ಜರಕಾಡಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು “ಸ್ವಂತ ಮತ್ತು ಸಮಾಜಕ್ಕಾಗಿ ಯೋಗ” ಎಂಬ […]