ಬ್ರಹ್ಮಾವರದಲ್ಲಿರುವ ಪ್ರತಿಷ್ಠಿತ ಕಂಪೆನಿಗೆ ಕಲೆಕ್ಷನ್/ಮಾರ್ಕೆಟಿಂಗ್ ಜಾಬ್ ಗೆ ಯುವಕರು ಬೇಕಾಗಿದ್ದಾರೆ.
ಸಂಪರ್ಕ ಸಂಖ್ಯೆ 8951504630Email:- [email protected]
ಉಡುಪಿ: ಸುಶ್ಮಿತಾ ಆಚಾರ್ಯಗೆ ಮಿಸ್ ಕೋಸ್ಟಲ್-2024 ಕಿರೀಟ.
ಉಡುಪಿ: ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್-2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಸದ್ಯ ಸಾಫ್ಟ್ ವೇರ್ ಇಂಜಿನಿಯರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ‘ಸುಜಾಸ್ ‘ನ ಜಯಲಕ್ಷ್ಮೀ ಇವರಿಗೆ ಮಾರ್ಗದರ್ಶನ ಮಾಡಿದ್ದರು. ಇವರು ಮುಲ್ಕಿಯ ಕೆ.ಸತೀಶ್ ಆಚಾರ್ಯ, ಸ್ವಾತಿ ಆಚಾರ್ಯ ದಂಪತಿ ಪುತ್ರಿ ಆಗಿದ್ದಾರೆ.
ಉಡುಪಿ: ರಸ್ತೆ ಬದಿಯಲ್ಲಿರುವ ಕಾಮಗಾರಿ ಸಾಮಾಗ್ರಿಗಳನ್ನು ತೆರವುಗೊಳಿಸಿ – ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ.
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಯಾವುದೇ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಾಗಿ ಬಳಸುವ ಸಾಮಾಗ್ರಿಗಳನ್ನು, ಜಲ್ಲಿ, ಕಲ್ಲು, ಮಣ್ಣು, ಹೊಗೆ ಇತ್ಯಾದಿಗಳನ್ನು ಶೇಖರಿಸಲು ಅವಕಾಶ ಇರುವುದಿಲ್ಲ. ಮೇಲ್ಕಂಡ ಸಾಮಾಗ್ರಿಗಳನ್ನು ರಸ್ತೆ ಬದಿಯಲ್ಲಿ ದಾಸ್ತಾನು ಮಾಡುವುದರಿಂದ ನಗರದ ಸೌಂದರ್ಯಕ್ಕೆ, ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಹಿನ್ನೆಲೆ, ಸಂಬಂಧಿಸಿದವರು ಕೂಡಲೇ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ1964 ರ ಕಲಂ 219(1) ರಂತೆ ಮೇಲ್ಕಂಡ ಸಾಮಾಗ್ರಿಗಳನ್ನು ತೆರವುಗೊಳಿಸಲು ಹಾಗೂ ಕಲಂ 219(2) ರಂತೆ ದಂಡ […]
ಕುಂದಾಪುರ: ಸೊಸೈಟಿಯ ಒಳ ನುಗ್ಗಿದ ಕಳ್ಳನನ್ನು ತಕ್ಷಣ ಸೆರೆ ಹಿಡಿದ ಪೊಲೀಸರು.
ಕುಂದಾಪುರ: ವ್ಯಕ್ತಿಯೊಬ್ಬ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಹೊಸಾಡು ಶಾಖೆಯ ಕಿಟಿಕಿಯ ಸರಳು ಮುರಿದು ಕಳ್ಳತನ ಮಾಡುತ್ತಿದ್ದ, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು 10 ನಿಮಿಷದಲ್ಲೇ ಕಳ್ಳನನ್ನು ಹಿಡಿದ ಘಟನೆ ಗಂಗೊಳ್ಳಿ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ರಾತ್ರಿ ಸುಮಾರು 1.47 ಕ್ಕೆ ಮುಳ್ಳಿಕಟ್ಟೆಯಲ್ಲಿರುವ ಸಹಕಾರಿ ಸಂಘ ಕಿಟಕಿಯ ಗ್ರಿಲ್ ಒಡೆದು ಕಳ್ಳ ಒಳನುಗ್ಗಿದ್ದಾನೆ . ಕುಂದಾಪುರ ಅಂಕದಕಟ್ಟೆಯಲ್ಲಿರುವ ಸೈನ್ ಇನ್ ಸೆಕ್ಯುರಿಟಿಯ ಸಿಸಿಟಿವಿ ಲೈವ್ ಮಾನಿಟರಿಂಗ್ ನಲ್ಲಿ ಘಟನೆ ಬೆಳಕಿಗೆ ಬಂದು ಬೀಟ್ ಪೊಲೀಸರಿಗೆ […]
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್ ಚಾಂಪಿಯನ್, ಮಹಿಳಾ ವಿಭಾಗದಲ್ಲಿ ಉಜಿರೆ ಎಸ್‍ಡಿಎಂಗೆ ಪ್ರಶಸ್ತಿ.
ವಿದ್ಯಾಗಿರಿ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್‍ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ […]