ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ – ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪ್ರೊಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ […]

ಬಂಟಕಲ್ ಕಾಲೇಜಿನಲ್ಲಿ “ಅಂತರರಾಷ್ಟ್ರೀಯ ಯೋಗ ದಿನದ” ಆಚರಣೆ

ಉಡುಪಿ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‍ ಕ್ರಾಸ್ ಘಟಕ, ರೋಟರ್ಯಾಕ್ಟ್ ಘಟಕ ವತಿಯಿಂದ “ಸಮಾಜಕ್ಕಾಗಿ ಮತ್ತು ನಮಗಾಗಿ ಯೋಗ” ಎಂಬ ವಿಷಯದ ಕುರಿತು ಜೂನ್ 21 ರಂದು ಯೋಗದ ಬಗ್ಗೆ ಉಪನ್ಯಾಸವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಕೆ ರಾಘವೇಂದ್ರ ಭಟ್, ಜಿಲ್ಲಾ ಪ್ರಭಾರಿ, ಭಾರತ್ ಸ್ವಾಭಿನಾನ್ ಟ್ರಸ್ಟ್, ಉಡುಪಿ ಮತ್ತು ಶ್ರೀ ಸದಾಶಿವ ರಾವ್, ನಿವೃತ್ತ ಪ್ರಾಧ್ಯಾಪಕರು, ಪೂರ್ಣ ಪ್ರಜ್ಞಾ […]

ಉಡುಪಿ: ಜಾನುವಾರುಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ.

ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿ ಜಿಲ್ಲೆಯಾದ್ಯಂತ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜುಲೈ 27 ರ ವರೆಗೆ ಆಯೋಜಿಸಲಾಗಿದೆ. ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಕೂಡಾ ಈ ಬಾರಿಯೂ ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯಲ್ಲಿರುವ ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಬೇಕು. ಈ ಬಗ್ಗೆ ಹೈನುಗಾರರು […]

ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ

ಉಡುಪಿ: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ / ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ […]

ವಿಶ್ವಕ್ಕೆ ಯೋಗ ಪರಿಚಯಿಸಿದ್ದು, ಭಾರತ ದೇಶದ ಹೆಮ್ಮೆ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಭಾರತ ದೇಶವು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಸುಮಾರು 5000 ವರ್ಷಗಳ ಹಿಂದೆ ದೇಶದಲ್ಲಿ ಆರಂಭಗೊಂಡ ಯೋಗವು ಇಂದು 193 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಿದ್ಧಿ ಪಡೆದು ಭಾರತೀಯ ಪರಂಪರೆಯನ್ನು ವಿಶ್ವವ್ಯಾಪ್ತಿಗೊಳಿಸಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಕೌಟ್ಸ್ ಮತ್ತು […]