ಕಾರ್ಕಳ: ನಂದಳಿಕೆ ಕ್ರಾಸ್ ಬಳಿ ದ್ವಿಚಕ್ರ ವಾಹನ ಡಿಕ್ಕಿ – ಬಾಲಕಿ‌ ಮೃತ್ಯು.

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ. ಪ್ರಣಮ್ಯ ಅವರು ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯಕ್ಕೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಡುಪಿ: ಬ್ಯಾಂಕ್’ಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು.

ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಂತೆಕಟ್ಟೆ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು ಮಾಡಿರುವ ಘಟನೆ ಜೂ.20ರಂದು ರಾತ್ರಿ ವೇಳೆ ನಡೆದಿದೆ. ಶಾಖೆಯ ಕಿಟಕಿಯ ಸರಳನ್ನು ಕತ್ತರಿಸಿ ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿದ್ದ 2,50,000ರೂ. ಮೌಲ್ಯದ ಚೆಕ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – 2 ಹುದ್ದೆಯ ನೇಮಕಾತಿಗಾಗಿ ಅಜೆಕಾರು ಹಾಗೂ ಕಾಪು ರೈತ ಸಂಪರ್ಕ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರುವ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಸಿ […]