ಮಣಿಪುರ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿವೇಕ ಕೊಠಡಿ ನಿರ್ಮಾಣ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಉದ್ಘಾಟನೆ.
ಉಡುಪಿ: ಸರಕಾರಿ ಸಂಯುಕ್ತ ಪ್ರೌಢ ಶಾಲೆ ಮಣಿಪುರ ಇದರ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ 32.80 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು (ಜೂ.25) ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ರಮೇಶ್ ಪೂಜಾರಿ, ಸದಸ್ಯರಾದ ಮಹಮ್ಮದ್ ಷರೀಫ್, ಗೋವಿಂದ ಭಟ್, ಜಾನ್ ಸಿಕೈರಾ, ಹಾಜಿ ಹಸನ್ […]
ಕಾಸರಗೋಡು: ಹಿಟಾಚಿ ಯಂತ್ರ ಮಗುಚಿ ಬಿದ್ದು ಯುವಕ ಮೃತ್ಯು.
ಕಾಸರಗೋಡು: ಬೇಡಡ್ಕ ಠಾಣಾ ವ್ಯಾಪ್ತಿಯ ಬಂದಡ್ಕ ಪಡುಪ್ಪುನಲ್ಲಿ ಹಿಟಾಚಿ ಯಂತ್ರ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಇಂದು (ಜೂ.25) ಬೆಳಿಗ್ಗೆ ನಡೆದಿದೆ. ಮೃತಪಟ್ಟ ಯುವಕನನ್ನು ಬಂದಡ್ಕದ ಪ್ರೀತಂ ಲಾಲ್ ಚಂದ್ (22) ಎಂದು ಗುರುತಿಸಲಾಗಿದೆ. ಈತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ರವರ ಪುತ್ರ ಅವರಿಗೆ ಸೇರಿದ ಜೆಸಿಬಿ ಯಂತ್ರ ತೊಳೆಯುತ್ತಿದ್ದಾಗ ಈ ದುರಂತ ಸಂಭವಿಸಿದೆಬಂದಡ್ಕ ಪಡುಪ್ಪುನಲ್ಲಿರುವ ಸಂಬಂಧಿಕರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಂಗಳದಲ್ಲಿ ನಿಲ್ಲಿಸಿದ್ದ ಹಿಟಾಚಿ ತೊಳೆಯುತ್ತಿದ್ದಾಗ ಮಗುಚಿ ಬಿದ್ದಿದ್ದು, […]
ಪ್ರೋ. ನರೇಂದ್ರ ಎಲ್ ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸಂಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ
ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ ನರೇಂದ್ರ ನಾಯಕ್‍ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್‍ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ […]
ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ.
ಮಣಿಪಾಲ: ಮಣಿಪಾಲದ ಡಾ.ಟಿಎಂಎ ಪೈ ಫೌಂಡೇಶನ್ ನ ಘಟಕದ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ನ 2024 25 ನೇ ಸಾಲಿನ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವು ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ನ ಕ್ಯಾಂಪಸ್ ನಲ್ಲಿ ನಡೆಯಿತು. ಓರಿಯೆಂಟೇಷನ್ ಕಾರ್ಯಕ್ರಮವನ್ನು ಮಣಿಪಾಲದ ಎಂಐಟಿ ಜಂಟಿ ನಿರ್ದೇಶಕರಾದ ಟಿಆರ್ ಡಾ.ಸೋಮಶೇಖರ್ ಭಟ್ ಅವರು ಉದ್ಘಾಟಿಸಿ ಮಾತನಾಡಿ, ಕೃತಕ ಬುದ್ಧಿ ಮತ್ತು ತಂತ್ರಜ್ಞಾನವನ್ನು ಬಳಸಿ ದೇಶದಲ್ಲಿ ತಂತ್ರಜ್ಞಾನವನ್ನು ಸುಧಾರಿಸಲು ಮತ್ತು ಹೆಚ್ಚು ಪ್ರಗತಿಯನ್ನು ಸಾಧಿಸಲು ನಾವು ಪ್ರಯತ್ನಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಗೌರವ […]
ಶ್ರೀ ಆದರ್ಶ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ.
ಉಡುಪಿ: ಶ್ರೀ ಆದರ್ಶ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಹಲವಾರು ಯೋಗಾಸನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದರ್ಶ ನರ್ಸಿಂಗ್ ಕಾಲೇಜು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುದಿನ ಅವರು ಸ್ವಾಗತಿಸಿದರು.