ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈ. ಲಿ. ಮತ್ತು ಸುಹಾಸ್ ಆಟೋಮೋಟಿವ್ ಪ್ರೈ. ಲಿ. ಇವರಿಂದ ಕ್ಯಾಂಪಸ್ ಇಂಟರ್ವ್ಯೂ.

ಬಾರ್ಕೂರು: ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಆಡಳಿತಕ್ಕೊಳಪಟ್ಟ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವನ್ನು ಕೊಡಿಸುವ ಬಗ್ಗೆ ಚಿಂತನೆ ನಡೆಸಿ ಪ್ರತಿ ವರ್ಷ ಹಲವು ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ ಮಾಡುತ್ತ ಬರುತ್ತಿದೆ. ಹಾಗೆಯೇ ಜೂ.24 ರಂದು ಸಂಸ್ಥೆಗೆ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸುಹಾಸ್ ಆಟೋಮೋಟಿವ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಇಂಟರ್ವ್ಯೂ ನಡೆಯಿತು. ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.

ಕುಂದಾಪುರ: ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ.

ಕುಂದಾಪುರ: ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಜೂ.20ರಂದು ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ನೇಹಿತನ ಆಮಂತ್ರಣದಂತೆ ಯೋಗೀಶ್ ಹಾಗೂ ಸಂದೀಪ್ ಎಂಬವರು ತಿಪಟೂರಿನಿಂದ ಬೈಕಿನಲ್ಲಿ ಬೀಜಾಡಿಗೆ ಜೂ.19ರಂದು ಆಗಮಿಸಿದ್ದರು. ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದ ಇವರು ನೀರಿಗಿಳಿದು ಆಡುತ್ತಿದ್ದರು. ಈ ವೇಳೆ ಇವರಿಬ್ಬರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಇವರಲ್ಲಿ ಸಂದೀಪ್ ಅವರನ್ನು ಸ್ಥಳೀಯರು ರಕ್ಷಣೆ […]

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024

ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ ಜಿ ಕೆ ರಂಗಪುರಸ್ಕಾರ’ -2024 ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆ ಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರ ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯು, ಸರದಾರನ ಸ್ವಾಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, […]

ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಆಯ್ಕೆ.

ಉಡುಪಿ: ಆರ್ಯಭಟ ಸಾಂಸ್ಕೃತಿಕ ಆರ್ಗನೈಸೇಶನ್ ನೀಡುವ 49ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಿಂದ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲು ತೊಡಗಿಸಿಕೊಂಡಿರುವ ಡಾ. ಶ್ರುತಿ ಬಲ್ಲಾಳ್ ಅವರು ಬಿಗ್ ಮೆಡಿಕಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮ ಸಾಮಾಜಿಕ ಜವಾಬ್ದಾರಿ, ಚಟುವಟಿಕೆಗಳ ಭಾಗವಾಗಿ ಮಧುಮೇಹ ತಡೆಗಟ್ಟುವಿಕೆ,ಮುಂದೂಡಿಕೆ,ಆರೈಕೆ, ಉತ್ತಮ ಜೀವನ ಶೈಲಿಯ ಬಗ್ಗೆ ಶಾಲಾ – ಕಾಲೇಜು ಮತ್ತು ಸಂಘ – ಸಂಸ್ಥೆಗಳ […]

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯೋಗ ತರಬೇತಿ

ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಬೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ […]