ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯದಂತಹ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು […]

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯಲ್ಲಿ ಸೋಮವಾರ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು.“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ […]