ದರ್ಶನ ಅವರಿಗೆ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ಇದೊಂದು ಪರೀಕ್ಷೆಯ ಸಮಯ. ನಾವು ತಾಳ್ಮೆ, ಶಾಂತಿಯಿಂದ ಇರೋಣ: ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದು, ಇದೀಗ ಬೇಸರದಲ್ಲಿರುವ ಅಭಿಮಾನಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ. ತಾಳ್ಮೆಯಿಂದ ಇರಿ, ನ್ಯಾಯಾಲಯದ ಮೇಲೆ ನಂಬಿಕೆ ಇಡಿ ಎಂದು ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. […]
ನಾಳೆ (ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ (ಜೂನ್ 27) ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಆದೇಶ ಹೊರಡಿಸಿದರು. ಜಿಲ್ಲೆಯಲ್ಲಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಜಿಲ್ಲೆಯ ಪ್ರಮುಖ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳು ಮುಳುಗಡೆಯಾಗುವ ಭೀತಿಯಲ್ಲಿವೆ.
ತಕ್ಷಣ ಬೇಕಾಗಿದ್ದಾರೆ

ಬ್ರಹ್ಮಾವರ :ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ.
ಶಿರ್ವ: ಯುವಕ ನಾಪತ್ತೆ.

ಶಿರ್ವ: ಬೆಳಪು ಗ್ರಾಮದ ಜೆಸಿಂತಾ ಮಥಾಯಸ್ ಎಂಬವರ ಮಗ ಗೆವಿನ್ ಜೈಸನ್ ಮಥಾಯಸ್(24) ಎಂಬವರು ಬೈಕಂಪಾಡಿಗೆ ಹೋಗುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣೆ ಮಾಹಿತಿ ಕಾರ್ಯಗಾರ.

ಬ್ರಹ್ಮಾವರ: ಅಂತರಾಷ್ಟ್ರೀಯ ಮಾದಕ ವಿರೋದಿ ದಿನದಂದು ನಶಾಮುಕ್ತ ಭಾರತ್ ಅಭಿಯಾನ ಯೋಜನೆಯಡಿ ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಹಾಗೂ ಬ್ರಹ್ಮಾವರ ಅರಕ್ಷಕ ಠಾಣೆ ಇದರ ಜಂಟಿ ಆಶ್ರಯದಲ್ಲಿ ಜೂ.26 ರಂದು ವಿದ್ಯಾರ್ಥಿಗಳಿಗೆ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣೆ ಬಗ್ಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ಅರಕ್ಷಕ ಠಾಣೆಯ ಪೊಲೀಸ್ ಉಪ ನಿರೀಕ್ಷರಾದ ಶ್ರೀ ಮಧು ಬಿ. ಅವರು ಮಾದಕವ್ಯಸನ, ಸೈಬರ್ ಅಪರಾಧ, ವಾಹನ ಅಪಘಾತ, ಸಾಮಾಜಿಕ […]