ಮಣಿಪಾಲ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಆಚರಣೆ.

ಮಣಿಪಾಲ: ವಿದ್ಯಾರ್ಥಿ ವ್ಯವಹಾರಗಳ ವಿಭಾಗ, ಮಣಿಪಾಲ ವಿಶ್ವ ವಿದ್ಯಾಲಯ ಹಾಗೂ ಮಣಿಪಾಲ ಪೋಲಿಸ್ ರವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಯನ್ನು ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ದಿನ ಜೂನ್ 26ರಂದು ಆಚರಿಸಲಾಯಿತು. ಮಣಿಪಾಲದ ವಿಶ್ವವಿದ್ಯಾಲಯದ ಭದ್ರತಾ ಅಧಿಕಾರಿ ಕರ್ನಲ್ ವಿಜಯ್ ರೆಡ್ಡಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಇವರು ಮಾದಕ ವಸ್ತುಗಳಿಂದ ಆಗುವ ಅನಾಹುತಗಳ ಬಗ್ಗೆ ತಿಳಿಸಿದರು. ದೇವರಾಜ್ ಟಿವಿ ಪೊಲೀಸ್ ಇನ್ಸ್ಪೆಕ್ಟರ್ ಮಣಿಪಾಲ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಇವರು […]

ವ್ಯಸನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ಕೈಜೋಡಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್

ಉಡುಪಿ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಜೊತೆಗೆ ಸ್ವಯಂ ಪ್ರೇರಿತರಾಗಿ ಮಾದಕ ವಸ್ತುಗಳ ಸೇವನೆಯನ್ನು ವಿರೋಧಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಜೂ.೨೬ ರಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ.ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಜಿಲ್ಲಾಡಳಿತ, […]

ಜನಸ್ಪಂದನ ಸಭೆಯಲ್ಲಿ ಬಂದ ಜನಸಾಮಾನ್ಯರ ಅಹವಾಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜನಸ್ಪಂದನ ಸಭೆಯಲ್ಲಿ ಬಂದಂತಹ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳು ಕಾನೂನು ಪ್ರಕಾರ ವಿಲೇವಾರಿ ಮಾಡಬೇಕು ಒಂದೊಮ್ಮೆ ಅದು ಸರ್ಕಾರ ಹಂತದಲ್ಲಿ ಬಗೆ ಹರಿಸುವಂತಿದ್ದಲ್ಲಿ ಅದನ್ನು ಸರ್ಕಾರದ ಮುಖ್ಯಸ್ಥರಿಗೆ ಪ್ರಸ್ತಾವನೆ ಸಲ್ಲಿಸುವುದರೊಂದಿಗೆ ಅವುಗಳನ್ನು ಫಾಲೋ ಅಪ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಜೂ.೨೬ ರಂದು ಹೆಬ್ರಿಯ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಮೊದಲನೆದಾಗಿ ಹೆಬ್ರಿಯ ಪ್ರಗತಿಪರ ನಾಗರೀಕ ಸೇವಾ ಸಮಿತಿ ಹೆಬ್ರಿ […]

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ಜೂನ್ 30 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿಸೂಚನೆ ನೀಡಿದರು. ಅವರು ಜೂ.೨೬ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರಾ ಅರ್ಹತಾ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ […]

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು ಹಾಗೂ ನಿಟ್ಟೆಯ ವ್ಯಾಪ್ತಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಭೂ ಸ್ವಾಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅವರು ಜೂ.26 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ […]