ಜು.1: ಕ್ರಿಯೇಟಿವ್‌ನಲ್ಲಿ 15 ಪುಸ್ತಕಗಳ ಲೋಕಾರ್ಪಣೆ.
ಕಾರ್ಕಳ : ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳದ ಸಾಹಿತ್ಯ ಆಸಕ್ತರಿಗೆ, ಸಾಹಿತ್ಯ ಅಭಿರುಚಿಯುಳ್ಳವರಿಗೆ ಉತ್ತಮ ಸೇವೆಯನ್ನು ಒದಗಿಸುತ್ತ ಬರುತ್ತಿದೆ. ಇದೀಗ ಸಾಹಿತ್ಯದ ಮತ್ತೊಂದು ಹೊಸ ಹೆಜ್ಜೆ ಎಂಬಂತೆ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ನಾಡಿನ ಪ್ರಖ್ಯಾತ ಬರಹಗಾರರ 15 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಕ್ರಿಯೇಟಿವ್ ಸಂಸ್ಥೆಯ ಸಂಸ್ಥಾಪಕ ಅಶ್ವತ್ ಎಸ್. ಎಲ್. ಹೇಳಿದರು. ಅವರು ಪುಸ್ತಕಗಳ ಲೋಕಾರ್ಪಣೆ ಕುರಿತಾಗಿ ಜೂ. 28ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾರ್ಯಕ್ರಮ ಜು. […]
ಧರ್ಮಸ್ಥಳ: ವಿದ್ಯುತ್ ಶಾಕ್ ತಗುಲಿ ಯುವತಿ ಮೃತ್ಯು.
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಯುವತಿಗೆ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ ಘಟನೆ ಜೂ.27 ರಂದು ಸಂಜೆ ಸಂಭವಿಸಿದೆ. ಮೃತರನ್ನು ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದೆ. ಮನೆಗೆ ಬಂದಿದ್ದ ಪಾರ್ಸೆಲ್’ನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿದ್ದ ತಂದೆ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ತಂದೆಗೂ ವಿದ್ಯುತ್ ಆಘಾತವಾಗಿದ್ದು, ಆದರೆ ಪುತ್ರಿಯನ್ನು ರಕ್ಷಿಸಲು […]
ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಮಿಕ ರೋಗಗಳ ಕುರಿತು ಮುಂಜಾಗ್ರತಾ ಸಭೆ
ಉಡುಪಿ: ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ. ಮಲೇರಿಯಾ, ಫೈಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯ ಹಾಗೂ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆಯು ಇತ್ತೀಚಿಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸಾಂಕ್ರಮಿಕ ರೋಗಗಳು ಹರಡುವ ಸಂಭವವಿದ್ದು, […]
ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರ ವಿಖ್ಯಾತಿ ಪಡೆದಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ನಾಡಪ್ರಭು ಕೆಂಪೇಗೌಡರು ದೂರದೃಷ್ಠಿ ಇಟ್ಟುಕೊಂಡು ನಿರ್ಮಿಸಿದ ಬೆಂಗಳೂರು ನಗರ ಕೋಟ್ಯಾಂತರ ಜನರ ಬದುಕು ಕಟ್ಟಿಕೊಳ್ಳಲು ಆಶ್ರಯ ಆಗುವುದರ ಜೊತೆಗೆ ವಿಶ್ವವಿಖ್ಯಾತಿ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 15-16 ನೇ ಶತಮಾನದ […]
ಅನುಪಯುಕ್ತ ಪ್ಲಾಸ್ಟಿಕ್ ಬಳಸಿ ಇಂಟರ್‍ಲಾಕಿಂಗ್ ಪೇವರ್ಸ್ ನಿರ್ಮಾಣ
ಮೂಡುಬಿದಿರೆ: ಅನುಪಯುಕ್ತ ಪ್ಲಾಸ್ಟಿಕ್‍ಗಳನ್ನು ಬಳಸಿ ಗುಣಮಟ್ಟದ ಇಟ್ಟಿಗೆ (ಬ್ರಿಕ್ಸ್) ಹಾಗೂ ಪರಸ್ಪರ ಬೆಸೆಯುವ (ಇಂಟರ್‍ಲಾಕಿಂಗ್) ಪ್ರಿಕಾಸ್ಟ್ ಪೇವರ್ಸ್ ಅನ್ನು ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ (ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್) ವಿಭಾಗವು ಅಭಿವೃದ್ಧಿ ಪಡಿಸಿದ್ದು, ಮೈಸೂರಿನ ಜಾಗೃತ್ ಟೆಕ್ ಕಂಪೆನಿ ಜೊತೆ ವಾಣಿಜ್ಯ ಉತ್ಪನ್ನದ ಪೇಟೆಂಟ್ (ಪೇಟೆಂಟ್ ಸಂಖ್ಯೆ: 542790) ಪಡೆದಿದೆ. ಈ ಆವಿಷ್ಕಾರವು ಪರಿಸರ ಸಂರಕ್ಷಣೆ ಹಾಗೂ ನಿರ್ಮಾಣ ಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಿದೆ. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯುನ್ಮಾನ […]