ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆ – ಅರ್ಜಿ ಆಹ್ವಾನ
ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (KARTET 2024) ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸಿ.ಆರ್.ಪಿ.ಸಿ ಕಾಯ್ದೆಯನ್ವಯ ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಉಡುಪಿ: ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ
ಉಡುಪಿ: ನಮ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ ಕಾರಂತರಂತ ಶ್ರೇಷ್ಠ ಕಲಾವಿದರ ರಂಗಭೂಮಿ ಕ್ಷೇತ್ರದ […]