ಮಳೆಗಾಲದಲ್ಲಿ ಕಾಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಕಾಡುತ್ತವೆ. ಜನರ ಸಹಭಾಗಿತ್ವದೊಂದಿಗೆ ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಜನಸಾಮಾನ್ಯರಿಗೆ ರೋಗರುಜಿನಗಳು ಯಾವ ಮೂಲಕ […]

ಕೊಲ್ಲೂರು: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತ್ಯು.

ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು ಛಾಯ (7) ಎಂದು ಗುರುತಿಸಲಾಗಿದೆ. ಮಕ್ಕಳ ರಕ್ಷಣೆಗೆ ಮುಂದಾದ ತಾಯಿ ಶೀಲಾ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ..

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ ಹಾಗೂ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಮತ್ತು ಕೆದೂರು ಹಾಗೂ ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (ರೂ.25), ಕಸಿಗೇರು (ರೂ.32), ಕಾಳುಮೆಣಸು (ರೂ.11) ಹಾಗೂ ತೆಂಗು (ರೂ.75) ಸಸಿಗಳನ್ನು ಉತ್ಪಾದಿಸಲಾಗಿದ್ದು, […]

ಮಣಿಪಾಲ MSDCಯಲ್ಲಿ “ಇಂಡಸ್ಟ್ರಿಯಲ್ ಆಟೊಮೇಷನ್” ಕುರಿತು ಅಲ್ಪಾವಧಿ ತರಬೇತಿ.

ಮಣಿಪಾಲ: ಭಾರತ ಸರ್ಕಾರ NSDC ಅಡಿಯಲ್ಲಿ ಅನುಮೋದಿತಕೊಂಡ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(ಡಾ. ಟಿ.ಎಂ.ಎ. ಪೈ ಫೌಂಡೇಶನ್‌ನ ಒಂದು ಘಟಕ) ನಲ್ಲಿ ಇಂಡಸ್ಟ್ರಿಯಲ್ ಆಟೊಮೇಷನ್ ಕುರಿತು ಅಲ್ಪಾವಧಿಯ ತರಬೇತಿ ಕಾರ್ಯಕ್ರಮ (STTP)ಗಳನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಸಮಗ್ರ ಜ್ಞಾನವನ್ನು ಪಡೆಯಲು ಮತ್ತು ಕೈಗಾರಿಕಾ ಆಟೊಮೇಷನ್ ಕ್ಷೇತ್ರದಲ್ಲಿ ಕೌಶಲ್ಯಗಳನ್ನು ಬಲಪಡಿಸಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ಈ ಕೋರ್ಸ್ ಅನ್ನು ಅಕಾಡೆಮಿಕ್, ಕೆಲಸ ಮಾಡುವ ವೃತ್ತಿಪರರು ಮತ್ತು ಆಟೋಮ್ಯಾಟನ್ ಕ್ಷೇತ್ರದಲ್ಲಿ ತಮ್ಮ ವೃತ್ತಿಪರ ವೃತ್ತಿಜೀವನವನ್ನು ನಿರ್ಮಿಸಲು ಆಸಕ್ತಿ ಹೊಂದಿರುವ […]

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ […]