ಪೆರ್ಡೂರು ಪಿಡಿಓ ವರ್ಗಾವಣೆಗೆ ಬಿಜೆಪಿ ಬೆಂಬಲಿತ ಸದಸ್ಯರ ಒತ್ತಡ: ಸುದ್ದಿಗೋಷ್ಠಿಯಲ್ಲಿ ಪೆರ್ಡೂರು ಗ್ರಾಪಂ ಸದಸ್ಯ ಸಂತೋಷ ಕುಲಾಲ್ ಆರೋಪ.
ಉಡುಪಿ: ಪೆರ್ಡೂರು ಗ್ರಾಪಂ ಪಿಡಿಓ ಸುಮನಾ ಅವರು ಭ್ರಷ್ಟಾಚಾರ, ಕಾನೂನು ಬಾಹಿರ ವ್ಯವಹಾರಗಳಿಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲು ಒತ್ತಡ ತರಲಾಗುತ್ತಿದೆ. ಬೆದರಿಕೆ ಹಾಕಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪೆರ್ಡೂರು ಗ್ರಾಪಂ ಸದಸ್ಯ ಸಂತೋಷ ಕುಲಾಲ್ ಪಕ್ಕಾಲು ಆರೋಪಿಸಿದರು. ಉಡುಪಿಯ ಡಯಾನ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಭ್ರಷ್ಟಾಚಾರ, ಕಾನೂನು ಬಾಹಿರ ವ್ಯವಹಾರಗಳಿಗೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಮೂರೇ ತಿಂಗಳಲ್ಲಿ ಮೂರು ಮಂದಿ […]
ಕೋಟ: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ
ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಅಸೌಖ್ಯದಿಂದ ಭಾನುವಾರ ನಿಧನ ಹೊಂದಿದರು.ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರಅವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ […]
ಟಿ20 ವಿಶ್ವಕಪ್ ಗೆದ್ದ ‘ಟೀಂ ಇಂಡಿಯಾ’ಗೆ ಪ್ರಧಾನಿ ಮೋದಿಯಿಂದ ಶುಭಾಶಯ.
ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಟೀಂ ಇಂಡಿಯಾದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ. ಇನ್ನು 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು. ಇನ್ನು ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಆಟಗಾರರಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ […]
ಕಾರ್ಕಳ: ಮನೆ ಬಳಿ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ.
ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದ ಸೂಡಾ ಗ್ರಾಮದ ಬುಟ್ಟಿಮಾರ್ ಕಟ್ಟಿಯಂಗಡಿ ನಿವಾಸಿ ಸುರೇಶ(50) ಎಂಬವರು ಜೂ.29 ರಂದು ಮಧ್ಯಾಹ್ನ ಮನೆ ಬಳಿಯ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಕಾಂಗ್ರೆಸ್ ಸರಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಬ್ಲ್ಯಾಕ್ ಟೀ ಪ್ರತಿಭಟನೆ.
ಕಾರ್ಕಳ : ಕರ್ನಾಟಕದ ಕಾಂಗ್ರೆಸ್ ಸರಕಾರ ಹಾಲಿನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ಆಶ್ರಯದಲ್ಲಿ ಕಾರ್ಕಳ ಬಸ್ ಸ್ಟ್ಯಾಂಡ್ ವಠಾರದಲ್ಲಿ ಬ್ಲ್ಯಾಕ್ ಟೀ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಸ್ ಸ್ಟ್ಯಾಂಡ್ ಸಾರ್ವಜನಿಕರಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರು ,ಮಾಜಿ ಪುರಸಭಾ ಸದಸ್ಯ ಪ್ರಕಾಶ್ ರಾವ್, ಹಾಲನ್ನು ಹಾಕದೆ ಚಹಾ ತಯಾರಿಸಿ ಹಂಚುವುದರ ಜೊತೆಗೆ ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ವಿ […]