ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ: ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ
ಉಡುಪಿ: ವೈದ್ಯಕೀಯ ವೃತ್ತಿ ತುಂಬಾ ಅಮೂಲ್ಯವಾದದ್ದು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ ಎಂದು ಕರ್ನಾಟಕದ ಪ್ರಥಮ ಮಹಿಳಾ ಹೃದಯ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿಯವರು ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅಗಮಿಸಿ ಪ್ರಸ್ತುತ ವೈದ್ಯರಿಗಿರುವ ಸವಾಲುಗಳು, ಅದನ್ನು ಯಾವ ರೀತಿಯಲ್ಲಿ ಎದುರಿಸಿ ಮುನ್ನಡೆಯಬೇಕೆಂದು ಸಲಹೆ ನೀಡಿದರು. ಹಿರಿಯ ವೈದ್ಯರುಗಳಾದ ಮಣಿಪಾಲದ ಕುಟುಂಬ ವೈದ್ಯ ಡಾ। […]
ಉಡುಪಿ: ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ದೂರು ನೀಡಿ.
ಉಡುಪಿ: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್‌ಗಳನ್ನು ಕಡಿತಗೊಳಿಸಿದ್ದಲ್ಲಿ ಸದರಿ ಬಸ್ಸುಗಳ ನೋಂದಣಿ ಸಂಖ್ಯೆ ಲಭ್ಯವಿದ್ದಲ್ಲಿ, ಸಾರ್ವಜನಿಕರು ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಲಿಖಿತವಾಗಿ ದೂರನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2575137 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು: ಡಾ. ರೇವತಿ ಭಟ್
ವಿದ್ಯಾಗಿರಿ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು […]
ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ.
ಮಣಿಪಾಲ: ಭಾರತ ಸರ್ಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜದ ಅಂಗೀಕೃತ ಸಂಸ್ಥೆಯಾದ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ಪ್ರಾರಂಭಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾದ ಶ್ರೀ ವಿಶ್ವನಾಥ ಕಾಮತ್‍ರವರು ಮಾತನಾಡಿ ಶಿಕ್ಷಕಿಯರು ಮಗುವಿನ ಪ್ರತಿಭೆಯನ್ನು ಗುರುತಿಸಿ ಒಳ್ಳೆಯ ಮಾರ್ಗದರ್ಶನ ನೀಡಬೇಕೆಂದರು. ಅಲ್ಲದೇ ಪೂರ್ವಪ್ರಾಥಮಿಕ ಶಿಕ್ಷಕಿಯರನ್ನು ಮಕ್ಕಳು ಎಂದಿಗೂ ನೆನಪಿಸಿಕೊಳ್ಳುತ್ತಾರೆ ಹಾಗೂ ಒಳ್ಳೆಯ ಶಿಕ್ಷಕಿಯಾಗಲು ಸದಾ ಪ್ರಯತ್ನಿಸಬೇಕೆಂದು ಸಂಸ್ಥೆಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಕರೆ ನೀಡಿದರು. ಸಮಾರಂಭದ […]
ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ
ಉಡುಪಿ: ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಸೋಮವಾರ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೋಟರಿ ಉಡುಪಿ ಮಾದರಿ ಕಾರ್ಯ ಮಾಡುತಿದ್ದು, ಈ ಸಾಲಿನ ಪ್ರಥಮ ದಿನದಂದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು. ರೋಟರಿ ಉಡುಪಿ ಅಧ್ಯಕ್ಷ ರೋ। ಗುರುರಾಜ್ ಭಟ್ ಟಿ ಅಧ್ಯಕ್ಷತೆ ವಹಿಸಿದ್ದರು. […]