ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ.ರಿಷ್ಯಂತ್ ವರ್ಗಾವಣೆ, ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕ.

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ತಡರಾತ್ರಿ ಆದೇಶ ಹೊರಡಿಸಿದೆ. ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ರಿಶ್ಯಾಂತ್‌ ಅವರಿಂದ ಅಧಿಕಾರ ವಹಿಸಿಕೊಂಡವರು ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ […]

ವಚನಗಳ ಸಂಗ್ರಹಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಕೊಡುಗೆ ಅಪಾರ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಶರಣರ ವಚನಗಳನ್ನು ಸಂಗ್ರಹಿಸಿ, ತಮ್ಮ ಜೀವನವನ್ನೇ ಬಸವಾದಿ ಶರಣರ ವಚನಗಳನ್ನು ಪ್ರಚಾರ ಮಾಡಲು ಮುಡಿಪಾಗಿಟ್ಟು, ವಚನಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದ ವಚನ ಸಂಶೋಧನಾ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಚನ ಸಂರಕ್ಷಣೆಯಲ್ಲಿ ಅವರ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ […]

ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿಂದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಜಲಸಾಹಸ ಚಟುವಟಿಕೆಗಳಾದ ಬೋಟಿಂಗ್, […]

ಮಣಿಪಾಲ MSDC ಯಲ್ಲಿ “ಫುಲ್ ಸ್ಟಾಕ್ ಡೆವಲಪರ್” ಕೋರ್ಸ್’

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ದಲ್ಲಿ ಯುವಕ-ಯುವತಿಯರಿಗೆ ಐಟಿ ಕೌಶಲ್ಯದಲ್ಲಿ ಪರಿಣಿತರಾಗಲು ಸಂಸ್ಥೆಯು “ಫುಲ್ ಸ್ಟಾಕ್ ಡೆವಲಪರ್ ” (FULL STACK DEVELOPER) ಕೋರ್ಸ್’ನ ಪ್ರವೇಶಾತಿಯನ್ನು ಆರಂಭಿಸಿದೆ. Course Outline: 🔳Web Technologies And Framework: HTML 5, CSS, Bootstrap, Django, DTL, jQuery, Ajax 🔳Programming Languages: Python, JavaScript 🔳Databases: SQLite, PostgreSQL 🔳Cloud Computing: AWS Services 🔳IDEs: VS Code, […]

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು.9ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಎಲ್ಲೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಗ್ರಾಮಾಂತರ, […]