ನಾಳೆ (ಜುಲೈ 5) ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಲಾಗಿದೆ.ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ […]

ಕಾಲು ಗಂಟಿನ ಮೂಳೆ ಬದಲಾವಣೆ (KNEE JOINT REPLACEMENT SURGERY )ತಡೆಯಲು ಹಾಗೂ ಗಂಟು ನೋವಿಗೆ ಆಯುರ್ವೇದ ಚಿಕಿತ್ಸೆ:ಡಾ. ಎಂ. ವಿ. ಉರಾಳ್

ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿ ಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭ ವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಸಂಧಿವಾತದ ಲಕ್ಷಣ ಮತ್ತು ಕಾರಣಗಳು :ಸಾಮಾನ್ಯವಾಗಿ ಸಂಧಿವಾತ 40 ವರ್ಷದ ಬಳಿಕ ಕಾಣಿಸಿಕೊಳ್ಳುತ್ತದೆ.ಸಂಧಿಗಳಲ್ಲಿ ಅಂದರೆ ಭಾರವನ್ನು ಹೊರುವ […]

ಉಡುಪಿ: ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ

ಉಡುಪಿ, ಜುಲೈ 04: ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು.ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು […]

ಮನೆಯೇ ಗ್ರಂಥಾಲಯ- ನಲ್ವತ್ತೈದನೇ ಸರಣಿ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಮತ್ತು ಕಾಪು ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಪೊಲಿಪು ನಮಸ್ತೇ ಹೋಂ ಸ್ಟೇ ರೆಸಾರ್ಟ್‌ ನಲ್ಲಿ ಜರಗಿದ ಮನೆಯೇ ಗ್ರಂಥಾಲಯ ದ ನಲವತ್ತೈದನೇ ಸರಣಿ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಸಿಎ ದೇವ್ ಆನಂದ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾತು ಕಡಿಮೆ‌ ಮಾಡಿ, ಕೃತಿಯ ಮೂಲಕವಾಗಿ ಜನರ ನಡುವೆ ಗುರುತಿಸಿಕೊಳ್ಳುವಲ್ಲಿ ರೋಟರಿ ಸಂಸ್ಥೆ ಹಾಗು ಕಸಾಪ ಪ್ರಯತ್ನ ಶೀಲವಾಗಿದೆ. ಜನರಲ್ಲಿ ವಿಷಯ ಸಂಗ್ರಹಣೆ, […]

ಕೊಲ್ಲೂರು: ಗುಡ್ಡ ಕುಸಿದು ಮಹಿಳೆ ಸ್ಥಳದಲ್ಲೇ ಮೃತ್ಯು.

ಉಡುಪಿ: ಮನೆಯ ಎದುರಿನ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ ಮಹಿಳೆಯೋರ್ವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಕೊಲ್ಲೂರು ಗ್ರಾಮದ ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟ ಮಹಿಳೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಗೆ ಮನೆಯ ಎದುರಿನ ಗುಡ್ಡ ಕುಸಿದಿದ್ದು, ಮಣ್ಣಿನ ಅಡಿ ಸಿಲುಕಿದ ಅಂಬಾ ಅವರು ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಕೊಲ್ಲೂರು ಪೊಲೀಸ್ […]