ಅಶ್ವತ್ ಎಸ್.ಎಲ್ ನಿರ್ದೇಶನದಲ್ಲಿ ಮೂಡಿಬಂದ “ಅರಿವಿನ ದಾರಿ” ಕಿರುಚಿತ್ರ: ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ.

ಕಾರ್ಕಳ: ಅಶ್ವತ್ ಎಸ್.ಎಲ್ ಅವರ ನಿರ್ದೇಶನದಲ್ಲಿ ಕ್ರಿಯೇಟಿವ್ ಮೀಡಿಯಾದಿಂದ ಮೂಡಿಬಂದ “ಅರಿವಿನ ದಾರಿ” ಕಿರುಚಿತ್ರ ಬಿಡುಗಡೆಗೊಂಡಿದ್ದು, ಈ ಕಿರುಚಿತ್ರ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ.

ನಿಮಗೆ ಶ್ರವಣ ಸಮಸ್ಯೆ ಇದೆಯೇ.. ಹಾಗಾದರೆ ಇಲ್ಲಿದೆ ಸೂಕ್ತ ಪರಿಹಾರ.

ಉಡುಪಿ : ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ಈ ಎಲ್ಲಾ ಪರೀಕ್ಷೆಗಳು‌ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರಿನಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ಮಲ ಪ್ರಭು ಮೊಬೈಲ್: 8867693809/ 9880029809 (ಆಡಿಯಾಲಜಿಸ್ಟ್ & ಸ್ಪೀಚ್ ಲ್ಯಾಂಗ್ವೇಜ್ ಪಥಾಲಜಿಸ್ಟ್ ) ಸ್ಥಳ: ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್,1ನೇ ಮಹಡಿ, ದೇವರಾಜ್ ಟವರ್ಸ್, […]

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17). ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ […]

ಫಲಾನುಭವಿ ಆಧಾರಿತ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ […]

ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು […]