ನಾಳೆ (ಜುಲೈ 6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ಪೆರ್ಡೂರು: ಜೆಸಿಬಿಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು.

ಪೆರ್ಡೂರು: ಜೆಸಿಬಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರ್ಡೂರು ಗ್ರಾಮದ ನಾಯರ್‌ಕೋಡ್‌ನಲ್ಲಿ ಶುಕ್ರವಾರ (ಜು. 5) ಸಂಭವಿಸಿದೆ. ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಮನೆಯ ಆದರ ಸ್ತಂಭವಾಗಿದ್ದು, […]

ಭಾರಿ ಮಳೆ: ನಾಳೆ (ಜುಲೈ 6) ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 6) ರಜೆ ಘೋಷಿಸಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಆದೇಶ ನೀಡಿದ್ದಾರೆ. ಭಾರೀ ಗಾಳಿಮಳೆಗೆ ಮೂರು ತಾಲೂಕಿನಾದ್ಯಂತ ಅಪಾರ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ರಚನೆ ಸ್ಪರ್ಧೆ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ Biz – Rangoli- 2024 ರ ಶೀರ್ಷಿಕೆಯಡಿಯಲ್ಲಿ ಜು.೪ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳ ಲೋಗೋ ಗಳನ್ನು ರಂಗೋಲಿಯ ಮೂಲಕ ಪ್ರಸ್ತುತ ಪಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. 45 ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ವಿವಿಧ ಕಂಪನಿಗಳ ಲೋಗೋವನ್ನು ಪ್ರಸ್ತುತ ಪಡಿಸಿದರು. ತೀರ್ಪುಗಾರರಾಗಿ ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್ , ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಕ್ರಾಪ್ಟ್ ಶಿಕ್ಷಕಿ […]

ಕುಂದಾಪುರ: ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ.

ಕುಂದಾಪುರ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. […]