ತ್ರಿಶಾ ಕ್ಲಾಸಸ್ ಮಂಗಳೂರು : ಸಿಎ ಫೌಂಡೇಶನ್ ಮಾಹಿತಿ ಕಾರ್ಯಾಗಾರ
ಮಂಗಳೂರು : ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಜುಲೈ 5 ರಂದು ಮಂಗಳೂರಿನ ಶ್ರೀ ರಾಮಾಶ್ರಮ ಪಿಯು ಕಾಲೇಜಿನಲ್ಲಿ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು.ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಸಿಎ ಸಂತೋಷ್ ಪ್ರಭು ಅವರು ಸಿಎ ಪರೀಕ್ಷೆ ರಾಷ್ಟ್ರ ಮಟ್ಟದ ಪರೀಕ್ಷೆಯಾಗಿದೆ. ದೇಶ-ವಿದೇಶಗಳಲ್ಲಿಯೂ ಉತ್ತಮ ಉದ್ಯೋಗ ಅವಕಾಶಗಳನ್ನು ಹೊಂದಿದೆ. ತರಗತಿಯ ಮೊದಲ ದಿನದಿಂದಲೇ ಪರೀಕ್ಷಾ ತಯಾರಿಯನ್ನು ನಡೆಸಿದರೆ ಉತ್ತಮ ಶ್ರೇಣಿಯ ಅಂಕಗಳೊಂದಿಗೆ ಉತ್ತೀರ್ಣರಾಗಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. […]
ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಜು.7 ರಂದು ವೈದ್ಯರಿಗೆ ಸನ್ಮಾನ ಕಾರ್ಯಕ್ರಮ.
ಉಡುಪಿ: ವೈದ್ಯರ ದಿನದ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜು.7 ರಂದು ಬೆಳಿಗ್ಗೆ 9:30ಕ್ಕೆ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ, ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್ ಉಪಸ್ಥಿತರಿರಲಿದ್ದಾರೆ. ಈ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಿದ ಕಾಪುವಿನ ಪ್ರಶಾಂತ್ ಅಸ್ಪತ್ರೆಯ […]
ಬಾರ್ಕೂರು ನೇಶನಲ್ ಐ.ಟಿ.ಐ ಹೇರಾಡಿಯಲ್ಲಿ ಮಹಿಳಾ ಅಭ್ಯರ್ಥಿಗಳ ತರಬೇತಿಗೆ ವಿಶೇಷ ಅವಕಾಶ.
ಬಾರ್ಕೂರು: ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ (ರಿ) ಇದರ ಆಡಳಿತಕ್ಕೊಳಪಟ್ಟ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯು 1984 ರಲ್ಲಿ ಪ್ರಾರಂಭಗೊಂಡು ಉಡುಪಿ ಜಿಲ್ಲೆಯಲ್ಲೇ ಪ್ರಥಮ ಕೈಗಾರಿಕಾ ತರಬೇತಿ ಸಂಸ್ಥೆಯಾಗಿ ಹೆಸರು ಪಡೆದಿದೆ. ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ (National Council for Vocational Training) ನೊಂದಿಗೆ ಸಂಯೋಜನೆ ಹೊಂದಿದ ಸಂಸ್ಥೆಯಾಗಿದ್ದು, 40 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಈ ಸಂಸ್ಥೆಯು ದಿನೇ ದಿನೇ ಬೆಳೆದು ಹೆಮ್ಮರವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುವಲ್ಲಿ […]
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) ಪ್ರಸಕ್ತ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನಸಹಾಯಕ್ಕಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48. 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ದೂರವಾಣಿ ಸಂಖ್ಯೆ: 080-23475188, […]
ರೋಟರಿ ಉಡುಪಿಯ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ, ಸಹಾಯಧನ ವಿತರಣೆ
ಉಡುಪಿ: ಉಡುಪಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಎಂಜಿಎಮ್ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು. ಭಾವೀ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ರೋಟರಿ ಉಡುಪಿಯ ನೂತನ ಅಧ್ಯಕ್ಷ ಗುರುರಾಜ್ ಭಟ್.ಟಿ ಅವರಿಗೆ ಕೊರಳ ಪಟ್ಟಿ ಮತ್ತು ಪಿನ್ ತೊಡಿಸುವುದರ ಮೂಲಕ ಅಧಿಕಾರ ಹಸ್ತಾಂತರಿಸಿ ಮಾತನಾಡಿ, ರೋಟರಿ ಸಂಸ್ಥೆಗಳು ನಿರಂತರ ಸೇವಾ ಚಟುವಟಿಕೆಗಳ ಮೂಲಕ ಜನರನ್ನು ತಲುಪಬೇಕಲ್ಲದೇ ರೋಟರಿ ಸದಸ್ಯರನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ […]