ದಿವ್ಯಾಂಗರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗೆ ತಪಾಸಣಾ ಶಿಬಿರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಉಡುಪಿ (ಅನುಷ್ಠಾನ-ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ) ಹಾಗೂ ಕೃತಕ ಅಂಗಾಂಗ ತಯಾರಿಕ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಇವರ ಸಹಯೋಗದೊಂದಿಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ.ಡಿ.ಐ.ಪಿ ಮತ್ತು ಆರ್.ವಿ.ವೈ ಯೋಜನೆಯಡಿಯಲ್ಲಿ ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು […]
ಜನಸಾಮಾನ್ಯರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಅಹವಾಲು ಮೂಲಕ ನೀಡಿದ ಅರ್ಜಿಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ಅವರು ಶುಕ್ರವಾರ ಬ್ರಹ್ಮಾವರದ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡುತ್ತಿದ್ದರು. ಜನಸ್ಪಂದನ ಸಭೆಗಳು ಜನರಿಗೆ ಸಹಕಾರಿ ಯಾಗಬೇಕು. ಅಧಿಕಾರಿಗಳು ಸಮಸ್ಯೆ ಇತ್ಯರ್ಥಪಡಿಸಲು ಸೂಕ್ಷ್ಮ ರೀತಿಯಲ್ಲಿ ಸ್ಪಂದಿಸಬೇಕು. ರಸ್ತೆ ಸಮಸ್ಯೆ, […]
ಡೆಂಗ್ಯೂ ಜ್ವರ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಪ್ರತೀ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನವಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದ್ದು, ಇದಕ್ಕೆ ಶುಕ್ರವಾರ ಉಡುಪಿ ತಾಲೂಕಿನ ಕೊಡಂಕೂರು ವಾರ್ಡಿನ ಪ್ರಮೋದ್ ಬಡಾವಣೆಯಲ್ಲಿ […]