ಜುಲೈ 9: ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 9 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, […]

ಜಿ. ಎಂ. ಗ್ಲೋಬಲ್ ಶಾಲೆ : ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಬ್ರಹ್ಮಾವರ: ಬ್ರಹ್ಮಾವರದ ಜಿ. ಎಂ. ಗ್ಲೋಬಲ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ ಬೆಳಸಿಕೊಳ್ಳಲು ಅನುಕೂಲವಾಗುತ್ತದೆ. ವಸತಿ ನಿಲಯದ ವಿದ್ಯಾರ್ಥಿಗಳು […]

ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕ ಸುರಕ್ಷತೆಗೆ ಕ್ರಮ ವಹಿಸಿ.

ಉಡುಪಿ: ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ನಿರ್ಮಾಣದಾರರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯಿದೆ, 1996 ಹಾಗೂ ಕರ್ನಾಟಕ ನಿಯಮಗಳು 2006 ರಡಿ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆ ವಹಿಸುವುದು ನಿರ್ಮಾಣದಾರರ ಜವಬ್ದಾರಿಯಾಗಿರುತ್ತದೆ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಕಾಮಗಾರಿ ಆರಂಭ ಮಾಡಿರುವ ಸ್ಥಳಗಳಲ್ಲಿ ಭೂಕುಸಿತ, ಅಪಘಾತ ಹಾಗೂ ಅವಘಡ ಉಂಟಾಗದಂತೆ ಸೂಕ್ತ ಕ್ರಮಗಳನ್ನು ತಕ್ಷಣ ತೆಗೆದುಕೊಂಡು ಯಾವುದೇ ಕಾರ್ಮಿಕರ ಜೀವ […]