ನಾಳೆ(ಜುಲೈ09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಕನ್ನರ್ಪಾಡಿಯಲ್ಲಿ ನೆರೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಕಾರು: ಮೂವರು ಅಪಾಯದಿಂದ ಪಾರು

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು‌ ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬ್ಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಸುಶಾಂತ್ ಅನಿಲ್ ಲೋಬೊ ಅವರಿಗೆ ಪಿಎಚ್‌ಡಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ತರಬೇತಿ ಮತ್ತು ನಿಯೋಜನೆ ಘಟಕದ ಮುಖ್ಯಸ್ಥ ಹಾಗೂ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಸುಶಾಂತ್ ಅನಿಲ್ ಲೋಬೊ ‘ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಷನ್ ಆಫ್ ಎಂಇಎಂಎಸ್ ಪೀಜೋಎಲೆಕ್ಟ್ರಿಕ್ ವೈಬ್ರೇಷನ್ ಸೆನ್ಸಾರ್’ (ಎಂಇಎಂಎಸ್ ಪಿಜೋಎಲೆಕ್ಟ್ರಿಕ್ ಕಂಪನ ಸಂವೇದಕಗಳ ವಿನ್ಯಾಸ ಮತ್ತು ಅನುಷ್ಠಾನ) ವಿಷಯ ಕುರಿತು ಮಂಡಿಸಿದ ಪ್ರೌಢ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಮಾನ್ಯ ಮಾಡಿದೆ. (ಎಐಇಟಿ)ಎಲೆಕ್ಟ್ರಾನಿಕ್ಸ್ […]

ಉಡುಪಿ: ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಶರಣಾದ ಟೆಂಪೋ ಮಾಲೀಕ

ಉಡುಪಿ: ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಮಾಲೀಕ ಮಹೇಶ್ ಪಾಲನ್ (35) ಅವರು ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಲ್ಲವ ಮಹಾಜನ ಸಂಘ, ಉದ್ಯಾವರ ಯುವಕ ಮಂಡಲ ಮತ್ತು ಗುಡ್ಡೆಯಂಗಡಿ ಫ್ರೆಂಡ್ಸ್ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ತಂದೆ ಆ್ಯಂಬುಲೆನ್ಸ್ […]

ಭಾರೀ ಮಳೆ: ನಾಳೆ (ಜುಲೈ 9) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹ ಬಂದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.