ಆಗಸ್ಟ್ 17, 18: ಬೆಂಗಳೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆ.
ಬೆಂಗಳೂರು: ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ. ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನ ಮೂಲಕ […]
ಬಂಟ್ವಾಳ: ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ: ಸವಾರ ಮೃತ್ಯು
ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ನಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬೆಂಜನಪದವು ನಿವಾಸಿ ನಯನ್ ಕುಮಾರ್ (22). ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರ ಬಿಇಒ ಗಳಿಗೆ ನೀಡಲಾಗಿದೆ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅಗತ್ಯತೆ ಕಂಡು ಬಂದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಸ್ಥಳೀಯ ಬಿ ಇಒ ಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕೆಲ ತಾಲೂಕಿನಲ್ಲಿ ಮಳೆಯಾಗುತ್ತಿದ್ದು, ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆಯಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವಡೆ ಕಡಿಮೆಯಾಗಿದ್ದು ಪರಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ಕೆಲ ಶಾಲಾ […]
ದಕ್ಷಿಣ ಕನ್ನಡ, ಉಡುಪಿಗೆ ಚಡ್ಡಿ ಗ್ಯಾಂಗ್ ಎಂಟ್ರಿ: ಕಳ್ಳರ ಕೃತ್ಯ ಸಿಸಿ ಕೆಮರಾದಲ್ಲಿ ಸೆರೆ.
ಮಂಗಳೂರು: ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ಚಡ್ಡಿ ಗ್ಯಾಂಗ್’ ಎಂಬ ಕಳ್ಳರ ತಂಡ ಶನಿವಾರ ರಾತ್ರಿ ಕೋಡಿಕಲ್‌ನ ಮನೆಯೊಂದರಲ್ಲಿ ಕಳ್ಳತನ ಘಟನೆ ನಡೆದಿದ್ದು, ಇದೇ ತಂಡ ಕೃತ್ಯವೆಸಗಿರುವ ಬಗ್ಗೆ ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್, ಮಧ್ಯಪ್ರದೇಶ, ರಾಜಸ್ಥಾನ ಮೊದಲಾದೆಡೆಗಳ ಕಳ್ಳರನ್ನು ಹೊಂದಿರುವ ಚಡ್ಡಿ ಗ್ಯಾಂಗ್, ಈ ಹಿಂದೆಯೂ ದ.ಕ., ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮನೆ ಕಳ್ಳತನ ಕೃತ್ಯ ನಡೆಸಿದೆ. ಕಳ್ಳರು ಮೈಮೇಲೆ ಚಡ್ಡಿ, ಬನಿಯಾನ್, ತಲೆ ಮೇಲೊಂದು ಬಟ್ಟೆ ಸುತ್ತಿಕೊಂಡಿದ್ದು, ಗ್ಯಾಂಗ್‌ನ ಸದಸ್ಯರು ಸೊಂಟದಲ್ಲಿ […]
Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ
ಮಣಿಪಾಲ: ಅನಂತನಗರದಲ್ಲಿರುವ Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಯು ಇಂಗ್ಲೀಷ್ ಬಲ್ಲವರಾಗಿರಬೇಕು. ಆಸಕ್ತರು ಸಿವಿ ಮತ್ತು ರೆಸ್ಯೂಮ್ ಅನ್ನು [email protected] ಗೆ ಇ ಮೇಲ್ ಮಾಡಬಹುದು. ಸಂಪರ್ಕ: 9591982777