ಬ್ರಹ್ಮಾವರ: ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ
ಬ್ರಹ್ಮಾವರ: ರೋಟರ್ಯಾಕ್ಟ್ ಕ್ಲಬ್ ಬ್ರಹ್ಮಾವರದ ಪದಗ್ರಹಣ ಸಮಾರಂಭ ರೋಟರಿ ಸಭಾಭವನದಲ್ಲಿ ಜರುಗಿತು. 2023-24 ನೇ ಸಾಲಿನ ಅಧ್ಯಕ್ಷರಾದ ಅಪೂರ್ವ ರವರು 2024 25 ನೇ ಸಾಲಿನ ಅಧ್ಯಕ್ಷರಾದ ಅಮೃತ ರವರಿಗೆ ಅಧಿಕಾರ ಹಸ್ತಾಂತರಿಸಿದರು. ಪದಪ್ರಧಾನ ಅಧಿಕಾರಿಯಾಗಿ ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷ ಆರೂರು ಶ್ರೀಧರ ವಿ ಶೆಟ್ಟಿ ಪದಪ್ರಧಾನ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೋಟರ್ಯಾಕ್ಟ್ ಸಭಾಪತಿ ನವೀನ್ ಅಮೀನ್, ಜಿಲ್ಲಾ ರೋಟರ್ಯಾಕ್ಟ್ ಪ್ರತಿನಿಧಿ ಚೇತನ್ ಕುಮಾರ್, ರೋಟರಿ ಕಾರ್ಯದರ್ಶಿ ಉದಯ ಪೂಜಾರಿ,ರೋಟರ್ಯಾಕ್ಟ್ ಸಭಾಪತಿ ಜಗದೀಶ್ ಕೆಮ್ಮಣ್ಣು […]
ತಕ್ಷಣ ಬೇಕಾಗಿದ್ದಾರೆ.
ಮಂಗಳೂರು – ಮಣಿಪಾಲದ ಪ್ರಸಿದ್ಧ ಪ್ರೊಡಕ್ಷನ್ MNC ಕಂಪೆನಿಗೆ ಐಟಿಐ, ಡಿಪ್ಲೊಮಾ ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಿ. – ಶ್ರೀನಿಧಿ ಹೆಗ್ಡೆ.
ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರು ಕೂಡ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಇನ್ನು ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ ಹೇಳುವ ಕೆಲಸಕ್ಕೂ ಮುಂದಾಗಲಿಲ್ಲ ಎನ್ನುವುದು ವಿಪರ್ಯಾಸ. ದೂರದ ಬೆಳಗಾವಿಯ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಕುರಿತು ಕಾಳಜಿ ವಹಿಸದೇ ಇರುವುದು ನಮ್ಮ ಜಿಲ್ಲೆಯ ದುರಾದೃಷ್ಟವೆ ಸರಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದ ಕಾರಣಕ್ಕೆ ರಾಜ್ಯ ಸರ್ಕಾರ ಜಿಲ್ಲೆಯನ್ನು […]
ಕುಂದಾಪುರ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕೊಲೆಗೆ ಯತ್ನ: ಓರ್ವ ಆರೋಪಿಯ ಬಂಧನ.
ಉಡುಪಿ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಅವರ ಕೊಲೆ ಮಾಡಲು ಇಬ್ಬರು ದುಷ್ಕರ್ಮಿಗಳು ವಿಫಲಯತ್ನ ನಡೆಸಿದ ಘಟನೆ ಜು.7 ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53) ಬಂಧಿತ ಆರೋಪಿಯಾಗಿದ್ದು, ಪುತ್ರ ಸನ್ನಿಧಿ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಸಹನಾ ಸುರೇಂದ್ರ ಶೆಟ್ಟಿ ಅವರ ಪತ್ನಿ ಕುಂದಾಪುರ ನಗರದ ಎ.ಎಸ್ ಟ್ರೇಡರ್ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ […]
ಮನೆ ಊಟ ಪಡೆಯಲು ಅನುಮತಿ ನೀಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಮನವಿ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ. ದರ್ಶನ್ ಅವರ ದೇಹದ ತೂಕ ಕೂಡ […]