ಅವಕಾಶ ದೊರೆತಾಗ ಊರು, ದೇಶ, ಭಾಷೆ ಮರೆಯಬಾರದು: ಡಾ. ಎಂ ಮೋಹನ ಆಳ್ವ
ಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ ಅಂಕುರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]
ಯುವ ಭಾರತೀಯ ಶಾಸ್ತ್ರೀಯ ಗಾಯಕರಿಗೆ ಪ್ರಪ್ರಥಮ ರಾಷ್ಟ್ರೀಯ ಸ್ಫರ್ಧೆಯನ್ನು ಆಯೋಜಿಸಿದ ಗ್ರೇಸ್ ಫೌಂಡೇಶನ್
ಜನಪ್ರಿಯ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಾರ, ಪದ್ಮಭೂಷಣ ಪಂಡಿತ್ ಸಿ.ಆರ್.ವ್ಯಾಸ್ ಅವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಗುಣಿಜಾನ್ ರಿಸರ್ಚ್ ಆರ್ಟ್ ಕಲ್ಚರ್ ಆಂಡ್ ಎಜುಕೇಶನ್ (ಗ್ರೇಸ್) ಫೌಂಡೇಶನ್ ‘ಗುಣಿಜಾನ್ ಬಂದಿಶ್ ಪ್ರತಿಯೋಗಿತ” ಎಂಬ ಅಖಿಲ ಭಾರತ ಶಾಸ್ತ್ರೀಯ ಗಾಯನ ಸ್ಫರ್ಧೆಯನ್ನು ಆರಂಭಿಸಿದೆ.ಗ್ರೇಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ಪಂಡಿತ್ ಸಿ.ಆರ್.ವ್ಯಾಸ್ ಅವರ ಪುತ್ರ ಶಶಿ ವ್ಯಾಸ್ ಅವರು ಈ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಮತ್ತು ಈ ಕಾರ್ಯಕ್ರಮದ ರೂಪುರೇಷೆಯು ಪಂಡಿತ್ ಸಿ.ಆರ್.ವ್ಯಾಸ್ ಅವರ ಹಿರಿಯ ಶಿಷ್ಯೆ ಅಪರ್ಣಾ ಕೇಳ್ಕರ್ ನಿರ್ವಹಿಸಿದ್ದಾರೆ. […]
ನಾಟ ( NATA) ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಳಿಗೆ ರಾಜ್ಯ ಮಟ್ಟದಲ್ಲಿ 195 ನೇ ರ್ಯಾಂಕ್.
ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195 ನೇ ರ್ಯಾಂಕ್ ಪಡೆಯುವುದರ ಮೂಲಕ ಉತ್ತಮ ಸಾಧನೆ ಮೆರೆದಿದ್ದಾರೆ. ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕಾಪು ಮಾರಿಗುಡಿ ದೇವಸ್ಥಾನಕ್ಕೆ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ಭೇಟಿ.
ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ […]
ಉಚಿತ ಉಪಕರಣ: ಅರ್ಜಿ ಆಹ್ವಾನ
ಉಡುಪಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000 ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಂದ ವೆಬ್‌ಸೈಟ್ udupi.nic.in/zpudupi.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ಬಿ […]