ಅಜೆಕಾರು: ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ

ಅಜೆಕಾರು: ಮರ್ಣೆ ಗ್ರಾ.ಪ. ಸಭಾಂಗಣದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ ಶ್ರೀಮತಿ ಪ್ರಭಾವತಿ ನಾಯಕ್ ಅಧ್ಯಕ್ಷರು ಮರ್ನೆ ಗ್ರಾಮ ಪಂಚಾಯತ್ ಇವರ ಅಧ್ಯಕ್ಷತೆಯಲ್ಲಿ ಜು.9 ರಂದು ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತಾಡಿ ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲು ತಿಳಿಸಿದರು. ವೈದ್ಯಾಧಿಕಾರಿ ಡಾ. ಅನುಷಾ ಶೆಟ್ಟಿ ಅವರು ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಮಾಹಿತಿ […]

ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೀರ್ಥಹಳ್ಳಿಯ ಅರ್ಪಿತಾ ಡಿ ಉತ್ತೀರ್ಣರಾಗಿದ್ದಾರೆ. ಅವರು ದತ್ತಾತ್ರಿ ಹಾಗೂ ನೇತ್ರಾವತಿ ದಂಪತಿಗಳ ಪುತ್ರಿಯಾಗಿದ್ದು, ಉಡುಪಿಯ ಗಣೇಶ್ ಮತ್ತು ಸುಧೀರ್ ಚಾರ್ಟೆಡ್ ಅಕೌಂಟೆಂಟ್ಸ್ ರವರ ಬಳಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ […]

ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

ಉಡುಪಿ: ಡೆಂಗೀಜ್ವರ, ಮಲೇರಿಯಾ ಜ್ವರ, ಮೆದುಳು ಜ್ವರ ಹರಡುವ ಆರೋಗ್ಯ ಮಾಹಿತಿ ನೀಡಿದ ಅವರು ಸೊಳ್ಳೆ ಉತ್ಪತ್ತಿ ಆಗುವ ತಾಣ ಹಾಗೂ ಉತ್ಪತ್ತಿ ಆಗದಂತೆ ತಡೆಗಟ್ಟುವ ಕುರಿತು ಮುಂಜಾಗೃತೆ ಕ್ರಮ ವಹಿಸಬೇಕು. ಆರೋಗ್ಯಮಂತ್ರಿಗಳು ಮತ್ತು ಆರೋಗ್ಯ ನಿರ್ದೇಶಾನಲಯ ಆದೇಶದಂತೆ ಪ್ರತಿ ಶುಕ್ರವಾರ ಡ್ರೈ ಡೇ ಮಾಡುವಂತೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದರು. ಅವರು ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಬೋಟ್ ಮಾಲೀಕರು, ಮೀನುಗಾರರು, ಮಹಿಳಾ ಮೀನುಗಾರರ ಸಂಘ, […]

ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ: ಪೌರಾಯುಕ್ತ ರಾಯಪ್ಪ

ಉಡುಪಿ: ಅಂಗವೈಕಲ್ಯತೆಯನ್ನು ದುರ್ಬಲತೆ ಎಂದು ಭಾವಿಸದೇ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸದುಪಯೋಗವನ್ನು ಪಡೆದುಕೊಂಡು, ಪ್ರತಿಯೊಬ್ಬ ಫಲಾನುಭವಿಗಳು ತಮ್ಮ ಕೆಲಸಗಳಿಗಾಗಿ ಯಾರ ಮೇಲೂ ಅವಲಂಭಿತವಾಗದೇ ತಾವೇ ಕಾರ್ಯಗಳನ್ನು ನಿಭಾಯಿಸಲು ಶಕ್ತರಾಗಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದು ಪೌರಾಯುಕ್ತ ರಾಯಪ್ಪ ಹೇಳಿದರು. ಅವರು ಬುಧವಾರ ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ […]