ವಾಲ್ಮೀಕಿ ನಿಗಮ ಬಹುಕೋಟಿ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದುಕೊಂಡುಹೋಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕಳೆದ ಎರಡ್ಮೂರು ದಿನಗಳಿಂದ ವಿವಿಧೆಡೆ ದಾಳಿ ನಡೆಸಿದ್ದರು. ಮಾಜಿ ಸಚಿವ […]

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. […]

ಉಡುಪಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಉದ್ದಿಮೆ ಪರವಾನಿಗೆ.

ಉಡುಪಿ: ನಗರಾಭಿವೃದ್ಧಿ ಇಲಾಖೆಯು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯಲು ರಾಜ್ಯಪತ್ರವನ್ನು ಹೊರಡಿಸಿರುವುದರಿಂದ, ನೀತಿಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ತಂಬಾಕು ಉತ್ಪನ್ನಗಳ ದಾಸ್ತಾನು ಹಾಗೂ ಮಾರಾಟ ಉದ್ದಿಮೆಗಳಿಗೆ ಪ್ರತ್ಯೇಕ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ನಗರದ ಮಣಿಪಾಲ ಪ್ರಗತಿನಗರದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ಮೆಕ್ಯಾನಿಕ್ ಎ.ಸಿ ಫಿಟ್ಟರ್, ಆಟೋ ಮೊಬೈಲ್ ಹಾಗೂ ಕಂಪ್ಯೂಟರ್ ಕೋರ್ಸುಗಳಲ್ಲಿ ಬಾಕಿ ಉಳಿದ ಸೀಟುಗಳ ಪ್ರವೇಶಾತಿಗೆ ಆಸಕ್ತ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಅಂಕಪಟ್ಟಿ, ಆಧಾರ್ ಮತ್ತಿತರ ದಾಖಲಾತಿಗಳನ್ನು ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ಮೊ.ನಂ: 9740541554 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]