ನಾಳೆ ಶಂಕರಪುರ ಸಾಲ್ಮರದಲ್ಲಿ ಕೃಷ್ಣವೇಣಿ ಆಶ್ರಯಧಾಮ, ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ.
ಉಡುಪಿ: ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಪು ತಾಲೂಕಿನ ಶಂಕರಪುರದ ಸಾಲ್ಮರದಲ್ಲಿ ನಿರ್ಮಿಸಿರುವ ನೂತನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ ಇದೇ ಜುಲೈ 15ರಂದು ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಹರಿದಾಸ್ ಭಟ್ ಹೇಳಿದರು. ಉಡುಪಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಉಡುಪಿ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ನೂತನ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ. […]
ಪಡುಅಲೆವೂರು: ಶ್ರಮದಾನದ ಮೂಲಕ ರಸ್ತೆಯ ಹೊಂಡ ಮುಚ್ಚಿದ ಗ್ರಾಮಸ್ಥರು
ಉಡುಪಿ: ರಾಂಪುರ ಸರ್ಕಲ್ ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು ಯುವಕ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಶ್ರಮದಾನದ ಮೂಲಕ ಹೊಂಡಗಳಿಗೆ ಮಣ್ಣುಹಾಕಿ ಮುಚ್ಚುವ ಕಾರ್ಯ ಮಾಡಿದ್ದಾರೆ. ರಸ್ತೆಯಲ್ಲಿ ದೊಡ್ಡ ಹೊಂಡಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಂಬಂಧಪಟ್ಟವರಿಗೆ ಹಾಗೂ ಜನಪ್ರತಿನಿಧಿಗಳಿಗೆ […]
ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ
ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಜು.16 ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ದಿನವಿಡೀ ಉತ್ತಮ ಮಳೆಯಾಗಿದೆ.
ಕಳರಿ ಸಮರ ಕಲೆ ಶಾಲೆಗಳಲ್ಲಿಯೂ ಕಲಿಸುವ ಕಾರ್ಯವಾಗಬೇಕು: ಕಳರಿಪಟು ಮೀನಾಕ್ಷಿ ಅಮ್ಮ
ಉಡುಪಿ: ಮಾನಸಿಕ ಹಾಗೂ ದೈಹಿಕ ಸಧೃಡತೆಗೆ ಕಳರಿ ಸಮರ ಕಲೆ ಪೂರಕವಾಗಿದೆ. ಈ ಕಲೆಯನ್ನು ಮಕ್ಕಳಿಗೆ ಅಗತ್ಯವಾಗಿ ಕಲಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಕಳರಿಪಟು ಮೀನಾಕ್ಷಿ ಅಮ್ಮ ಹೇಳಿದ್ದಾರೆ.ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ಉಡುಪಿ ಶ್ರೀಪೂರ್ಣ ಪ್ರಜ್ಞ ಸಭಾಂಗಣದಲ್ಲಿ ಆಯೋಜಿಸಿದ ಕಳರಿ ಸಮರ ಕಲೆ ಪ್ರಾತ್ಯಕ್ಷತೆ ಮತ್ತು ಪ್ರದರ್ಶನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಗಾಗಿ ಕಳರಿ ಸಮರ ಕಲೆಯನ್ನು ಅಭ್ಯಸಿಸಬೇಕು. ಇದರಿಂದ ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗುತ್ತಾರೆ. […]