ಉತ್ತರ ಕನ್ನಡ ಜಿಲ್ಲಾದ್ಯಂತ ನಾಳೆ (ಜು.16) ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ.16ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಶಾಲಾ-ಕಾಲೇಜು, ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರೀಯಾ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು.

ಬೆಳ್ತಂಗಡಿ: ತಾಲೂಕಿನ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿಯಲ್ಲಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ. ಮೃತರನ್ನು ಹರೀಶ (32) ಎಂದು ಗುರುತಿಸಲಾಗಿದೆ. ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಹರಿದು ಹರೀಶ್ ಅವರು ಮೃತಪಟ್ಟಿದ್ದಾರೆ. ಇನ್ನು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಹರೀಶ ಅವರು ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದರು ಎನ್ನಲಾಗಿದೆ.
ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆ ಉದ್ಘಾಟನೆ

ಉಡುಪಿ: ಶಂಕರಪುರದ ಸಾಲ್ಮರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆಯನ್ನು ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ಸೋಮವಾರ ಉದ್ಘಾಟಿಸಿದರು.ಬಳಿಕ ಆಶೀರ್ಚನ ನೀಡಿದ ಶ್ರೀಗಳು, ಆರ್ಯುವೇದ ಪದ್ದತಿ ನಮ್ಮ ದೇಶದ ಶ್ರೇಷ್ಠ ಔಷಧೀಯ ಪದ್ದತಿಯಾಗಿದ್ದು, ಇದು ವೈಜ್ಞಾನಿಕ ತಳಹದಿಯಿಂದ ಕೂಡಿದೆ. ಇದರ ಬಗ್ಗೆ ತಿಳಿದು ಕೊಳ್ಳುವುದು ಅಗತ್ಯ ಎಂದರು.ಇಂದು ಹಿರಿಯರಿಗೆ ಮನೆಯಲ್ಲೇ ಎಲ್ಲ ಸೌಕರ್ಯಗಳನ್ನು ಪೂರೈಸಲು ಆಗುತ್ತಿಲ್ಲ. ಹೀಗಾಗಿ ಇಂತಹ ಆಶ್ರಯಧಾಮಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ. […]
ದ.ಕ. ಜಿಲ್ಲೆಯಲ್ಲಿ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ಭಾರೀ ಮಳೆ: ಉಡುಪಿ ಜಿಲ್ಲೆಯಾದ್ಯಂತ ನಾಳೆ(ಜು.16) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜುಲೈ 16ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 16) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.