ಮಣಿಪಾಲ: ಫ್ಲ್ಯಾಟ್ ನಲ್ಲಿ ಸಿಲುಕಿಕೊಂಡ ಯುವತಿಯ ರಕ್ಷಣೆ

ಉಡುಪಿ: ಫ್ಲ್ಯಾಟ್ ವೊಂದರಲ್ಲಿ ಡೋರ್ ಲಾಕ್ ಆಗಿ ಮನೆಯೊಳಗಡೆ ಸಿಲುಕಿಕೊಂಡ ಯುವತಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ‌ ಮಣಿಪಾಲದಲ್ಲಿ ನಡೆದಿದೆ.ರಕ್ಷಿಸಲ್ಪಟ್ಟ ಯುವತಿಯನ್ನು 25 ವರ್ಷದ ಕೃತಿ ಗೋಯಲ್ ಎಂದು ಗುರುತಿಸಲಾಗಿದೆ. ಈಕೆ ಮಣಿಪಾಲದ ಫ್ಲಾಟ್ ಒಂದರ 4ನೇ ಮಹಡಿಯಲ್ಲಿ ಡೋರ್ ಒಳಗಡೆ ಲಾಕ್ ಆಗಿ ಹೊರಬರದೆ ಸಿಲುಕಿಕೊಂಡಿದ್ದಳು. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಡುಪಿ ಜಿಲ್ಲಾ ಅಗ್ನಿ ಶಾಮಕದಳವು ಮನೆಯೊಳಗೆ ಸಿಲುಕಿದ್ದ ಯುವತಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕದ ದಳದ ಹಿರಿಯ […]

ಮಲ್ಪೆ: ನಿಂತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ; ಸವಾರ ಗಂಭೀರ

ಉಡುಪಿ: ನಿಂತಿದ್ದ ಬಸ್ ಗೆ ಹಿಂಬದಿಯಿಂದ ಸ್ಕೂಟರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಬೆಳಿಗ್ಗೆ 07:30 ಕ್ಕೆ ಸಂಭವಿಸಿದೆ.ಗಾಯಗೊಂಡವರನ್ನು ಉಡುಪಿ ಗುಂಡಿಬೈಲಿನ ಲಕ್ಷಣ್ (60) ಎಂದು ಗುರುತಿಸಲಾಗಿದೆ. ಮಾಹಿತಿ‌ ತಿಳಿದು ಸ್ಥಳಕ್ಕೆ ಬಂದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡದವರು ಗಾಯಾಳುವನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಕ್ಷಣ್ ಅವರು ಗುಂಡಿಬೈಲುವಿನಲ್ಲಿ ಕಾರ್ತಿಕ್ ವೆಲ್ಡಿಂಗ್ ವರ್ಕ್ ಶಾಪ್ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಹೆಬ್ರಿ: ಧಾರಾಕಾರ ಮಳೆ; ರಸ್ತೆ ಮೇಲೆ ಹರಿದ ಸೀತಾನದಿ

ಹೆಬ್ರಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಆಗುಂಬೆ ಹೆಬ್ರಿ ಸಂಪರ್ಕಿಸುವ ಸೀತಾನದಿ ಬಳಿ ನದಿ ಉಕ್ಕಿ ರಸ್ತೆಯ ಮೇಲೆ ಹರಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸೋಮವಾರ ರಾತ್ರಿ ನೀರು ಮೇಲೆರುತ್ತಿದ್ದಂತೆ ವಾಹನ ಸಂಚಾರ ಕಡಿಮೆಯಾಗುತ್ತಾ ಬಂದಿದ್ದು ನಂತರ ರಾತ್ರಿ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ. ರಸ್ತೆಯ ಮೇಲ್ಭಾಗಕ್ಕೆ ಹರಿಯುತ್ತಿರುವ ನೀರು ಪಕ್ಕದ ಅಂಗಡಿ ಹೋಟೆಲ್ ಗಳ ಬಳಿ ತನಕ ಹರಿದು ಹಾಗೂ ಸುತ್ತಮುತ್ತಲಿನ ಪರಿಸರದ ತೋಟಗಳು ಜಲಾವೃತಗೊಂಡಿದೆ. ಸೀತಾನದಿ ಮಾರ್ಗದಲ್ಲಿ ವಾಹನ […]

ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಕ್ಕೆ ಅನುಮತಿ.

ಬ್ರಹ್ಮಾವರ: ಜಿಲ್ಲೆಯ ರೈತ ಹಾಗೂ ಸಾಮಾಜಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾದ ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿ 2024-25 ನೇ ಸಾಲಿನಿಂದ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ರಾಜ್ಯ ಸರ್ಕಾರ ಜು.15 ರಂದು ಆದೇಶ ಹೊರಡಿಸಿದೆ. ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ, ಇಲಾಖೆಯ 33 ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ […]

ಉಡುಪಿ: ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಅಲ್ಲದೆ […]