ಜು.18ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.೧೮ ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಕಂಬಳ ಕ್ಷೇತ್ರದ ವೀರ ವರಪ್ಪಾಡಿ ಬಡಗುಮನೆಯ ಕೋಣ “ಲಕ್ಕಿ” ಇನ್ನಿಲ್ಲ.

ಕಿನ್ನಿಗೋಳಿ: ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ವರಪಾಡಿ ‘ ಲಕ್ಕಿ’ ಎಂಬ ಕೋಣ ಬುಧವಾರ ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ.ಕಳೆದ ವರ್ಷದ ಕಂಬಳ ಸೀಸನ್ ನಲ್ಲಿ 5 ಮೆಡಲ್ ಗಳನ್ನು ಲಕ್ಕಿ ಗೆದ್ದುಕೊಂಡಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳದಲ್ಲಿ ನೇಗಿಲು ಹಿರಿಯ ವಿಭಾಗದಲ್ಲಿ ಲಕ್ಕಿ ಎರಡನೇ ಬಹುಮಾನ ಪಡೆದುಕೊಂಡಿದೆ. ಕಕ್ಯಪದವು, ಬೆಂಗಳೂರು, ನರಿಂಗಾನ, ಐಕಳ ಮತ್ತು ಜಪ್ಪು ಕಂಬಳಗಳಲ್ಲಿ ಮೆಡಲ್ ಗೆದ್ದಿದ್ದು, ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ ಕೋಣ ನಿಧನ ಹೊಂದಿರುವುದು ಹಲವು […]

ಬೇಕಾಗಿದ್ದಾರೆ

ಕುಂದಾಪುರ ಮತ್ತು ಮಣಿಪಾಲದ ಅತಿದೊಡ್ಡ ಪ್ರೊಸೆಸಿಂಗ್ ಮತ್ತು ಪ್ರೊಡಕ್ಷನ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳು.

ಜುಲೈ 18ರಂದು ಉದ್ಯೋಗ ಭರವಸೆ, ಕೃಷಿ ಭೂಮಿ ಹಕ್ಕುಪತ್ರ ಮಂಜುರಾತಿಗಾಗಿ ಆಗ್ರಹಿಸಿ ವಾಹನ ಜಾಥಾ

ಉಡುಪಿ: ಕೊರಗ ಸಮುದಾಯದ ಯುವ ಜನರ ಶೇ.100ರಷ್ಟು ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜುರಾತಿಗಾಗಿ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ಇದರ ನೇತೃತ್ವದಲ್ಲಿ ನಾಳೆ (ಜುಲೈ 18) ಕಾಪುವಿನಿಂದ ಬ್ರಹ್ಮಾವರದವರೆಗೆ ಕಾರು, ಆಟೋ ರಿಕ್ಷಾ, ಬೈಕ್, ಸ್ಕೂಟರ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜುಲೈ 22ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋ ರಾತ್ರಿ ನಿರಂತರ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ […]

ಚಲಿಸುತ್ತಿದ್ದ ಬಸ್ಸಿನಿಂದ ಕಳಚಿದ ಟಯರ್‌: ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು, ದೃಶ್ಯ ಸಿಸಿಟಿವಿಯಲ್ಲಿ ಸೆರೆ.

ಚಿಕ್ಕಮಗಳೂರು: ಬಸ್ಸೊಂದು ಚಲಿಸುತ್ತಿದ್ದ ಹಾಗೇ ಬಸ್ಸಿನ ಟಯರ್‌ ಏಕಾಏಕಿ ಕಳಚಿ ಬಿದ್ದ ಘಟನೆ ಎನ್‌ಆರ್‌ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್‌ನಲ್ಲಿ ನಡೆದಿದೆ. ಚಲಿಸುತ್ತಿರುವಾಗಲೇ ಬಸ್ಸಿನ ಟಯರ್‌ ಕಳಚಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್‌ ಯಾವುದೇ ಅಪಾಯವಾಗದೆ ಪ್ರಯಾಣಿಕರು ಪಾರಾಗಿದ್ದಾರೆ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಸುಗಮ ಬಸ್ಸು ಸರ್ಕಲ್‌ ಬಳಿ ತಲುಪುವಾಗ ಈ ದುರಂತ ಸಂಭವಿಸಿದೆ. ಸರ್ಕಲ್‌ ಬಳಿ ಚಾಲಕ ಬಸ್ಸನ್ನು ನಿಧಾನಗತಿಯಲ್ಲಿ ಚಲಿಸುತ್ತಿದ್ದುದರಿಂದ ದೊಡ್ಡ ಅಪಾಯವೊಂದು ತಪ್ಪಿದೆ ಎನ್ನಲಾಗಿದೆ.