ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಿ; ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಭೋದನೆಯ ಜೊತೆಗೆ ಶೌಚಾಲಯ ನೈರ್ಮಲ್ಯದ ಹೊಣೆಗಾರಿಕೆಯನ್ನು ವಹಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಶಾಲೆಗಳ ಶೌಚಾಲಯ ಸ್ವಚ್ಚತೆಗೆ ಸ್ಥಳೀಯಾಡಳಿತದ ಮೂಲಕ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ […]

ಭಾರೀ ಮಳೆ: ನಾಳೆ(ಜುಲೈ 19) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

ನಾಳೆ(ಜುಲೈ 19) ಬೈಂದೂರು ವಲಯದ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಬೈಂದೂರು ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬೈಂದೂರು‌ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಬೈಂದೂರು ವಲಯದ ಬಿಇ ಒ ಆದೇಶ ನೀಡಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್

ಭಾರೀ ಮಳೆಗೆ ಮನೆಯವರ ಕಣ್ಣೆದುರೇ ಕುಸಿದುಬಿತ್ತು ಗೋಡೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಭಾರೀ ಮಳೆಗೆ ಉಡುಪಿ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ದಿಢೀರ್ ಆಗಿ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮನೆಯ ಗೋಡೆ ಕುಸಿದು ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಉಡುಪಿಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಏಕಾಏಕಿಯಾಗಿ ಕುಸಿದುಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ.

ಕುಂದಾಪುರ: ಜುಲೈ 18 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆಯನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ರಾಜೇಶ್ ನಾಯಕ್ ಅವರು ಮಾತನಾಡಿ ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ದೆ, ಶಿಸ್ತು, ಸತತ ಪ್ರಯತ್ನದೊಂದಿಗೆ ಭಾವಿ ರಾಷ್ಟ್ರದ ಭಾಗ್ಯೋದಯ ಶಿಲ್ಪಿಗಳಾಬೇಕು ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ […]