ಹೆಬ್ರಿ: ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ: ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ.ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಹಗ್ಗದ ಸಹಾಯದಿಂದ ಹೊಳೆ ದಾಟುತ್ತಿದ್ದಾಗ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.ಇವರು ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ […]

ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಮತ್ತು ಉದ್ಯಾವರ ಗ್ರಾಮ […]

ಧಾರಾಕಾರ ಮಳೆ: ಬೊಳ್ಜೆ, ಉದ್ಯಾವರ ಪರಿಸರದಲ್ಲಿ ನೆರೆ ಭೀತಿ

ಉಡುಪಿ: ಉಡುಪಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಪಾಪನಾಶಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಪಾತ್ರದ ಪ್ರದೇಶಗಳಲ್ಲಿ ನೆರೆ ಭೀತಿ ಉಂಟಾಗಿದೆ.ವರುಣನ ಆರ್ಭಟಕ್ಕೆ ಉದ್ಯಾವರ ಬೊಳ್ಜೆ ಪರಿಸರದಲ್ಲಿ ನೆರೆ ಬಂದಿದ್ದು, ಮನೆಗಳಿಗೆ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಇದೇ ರೀತಿ ಮಳೆ ಮುಂದುವರಿದಲ್ಲಿ ಬೊಳ್ಜೆ ಪರಿಸರ ಸಂಪೂರ್ಣ ಮುಳುಗಡೆ ಆಗುವ ಸಂಭವಿದೆ. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಜಿಲ್ಲಾಡಳಿತ ಸಜ್ಜಾಗಿದೆ‌. ಉದ್ಯಾವರ, ಪಿತ್ರೋಡಿ, ಕಡೆಕಾರು ಭಾಗಗಳಲ್ಲಿಯೂ ನೆರೆ ಭೀತಿ […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಪ್ರೋತ್ಸಾಹ ಧನ ವಿತರಣೆ

ಕುಂದಾಪುರ: ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು, 2023- 2024 ನೇ ಶೈಕ್ಷಣಿಕ ಸಾಲಿನಲ್ಲಿ 592 ಅಂಕ ಗಳಿಸಿ, ರಾಜ್ಯಕ್ಕೆ 7 ನೇ ಸ್ಥಾನಿಯಾಗಿರುವ ಸಂಜನಾ.ಎನ್ ರವರಿಗೆ ಶಾಲಾ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ. ಯು ಪುತ್ರನ್ ಪ್ರೋತ್ಸಾಹ ಧನದ ಚೆಕ್ ನ್ನು […]

ಬೆಳ್ತಂಗಡಿ: ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ.

ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಜು.19ರಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.