ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪ ಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ :8277799990 ಅಥವಾ […]

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ

ಉಡುಪಿ: ವಾಣಿಜ್ಯ ಪರೀಕ್ಷೆಯು ಜುಲೈ 22 ರಿಂದ 31 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ […]

ಮಣಿಪಾಲ MSDC ಓರೆನ್ ಇಂಟರ್ನ್ಯಾಷನಲ್ ನಲ್ಲಿ “ಡಿಪ್ಲೋಮೋ ಇನ್ ಕಾಸ್ಮೆಟಾಲಜಿ” ಕೋರ್ಸ್.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೆನ್ ಇಂಟರ್ನ್ಯಾಷನಲ್ ನಲ್ಲಿ ವಿದ್ಯಾರ್ಥಿಗಳಿಗೆ “ಡಿಪ್ಲೋಮೋ ಇನ್ ಕಾಸ್ಮೆಟಾಲಜಿ” (DIPLOMA IN COSMETOLOGY) ಅಲ್ಪಾವಧಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೀವನೋಪಾಯವನ್ನು ಭದ್ರಪಡಿಸಿಕೊಳ್ಳಲು ಸಹಾಯ:MSDCಯು ಯುವಕ ಯುವತಿಯರಿಗೆ ಉತ್ತಮ ಜೀವನೋಪಾಯವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡುವ ಉದ್ಯಮ ಸಂಬಂಧಿತ ವಿವಿಧ ಕೌಶಲ್ಯ ತರಬೇತಿಗಳನ್ನು ತೆಗೆದುಕೊಳ್ಳಲು, ಯುವಕರನ್ನು ಸಕ್ರಿಯಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡುತ್ತಿದೆ. ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ:◼️ ಚರ್ಮ (Skin)◼️ ಕೂದಲು (Hair)◼️ಮೇಕಪ್ (Makeup)◼️ನೈಲ್ ಆರ್ಟ್ ಮತ್ತು ಎಕ್ಸ್‌ಟೆನ್ಶನ್ […]

ರಸ್ತೆ ಅಪಘಾತ ನಿಯಂತ್ರಣಕ್ಕೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವುಗಳು ಉಂಟಾಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಅಪಘಾತ ಪ್ರಕರಣಗಳನ್ನು ಸಾಧ್ಯವಾದಷ್ಟು ನಿಯಂತ್ರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷವೂ ಹೆಚ್ಚುತ್ತಿವೆ ಕಳೆದ ವರ್ಷದಲ್ಲಿ 1284 ರಸ್ತೆ […]

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರವು ಮಹಿಳೆಯರ ಹಾಗೂ […]