ಉಡುಪಿ: ಎಂಟು ಮಂದಿಗೆ ಹುಚ್ಚು ನಾಯಿ ಕಡಿತ; ಆತಂಕ ಸೃಷ್ಟಿ

ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಶನಿವಾರ ಮಧ್ಯಾಹ್ನ ವೇಳೆ ನಡೆದಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ […]

ನನ್ನ ವಿರುದ್ಧ ಮಾಡಿರುವ ಆರೋಪ‌ ಹಿಂಪಡೆಯಿರಿ, ಇಲ್ಲದಿದ್ದರೆ ಧರಣಿ ಕುಳಿತುಕೊಳ್ಳುತ್ತೇನೆ.

ಉಡುಪಿ: ನನ್ನ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪವನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ನಿಮ್ಮ ಕೈಯಲ್ಲಿದೆ. ನೀವು ಮುಖ್ಯಮಂತ್ರಿ ಆಗಿ ಒಂದು ವರ್ಷ ಕಳೆಯಿತು. ನಾನು ತಪ್ಪು ಮಾಡಿದರೆ ಜೈಲು ಶಿಕ್ಷೆ […]

ಕಾಪು: ಕಾರಿಗೆ ಬೈಕ್ ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಉಡುಪಿ: ಬೈಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಇಂದು ಸಂಜೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ‌. ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು […]

ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ: ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ ಜನಪ್ರಿಯ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿ ಕಸಾಪ ಉಡುಪಿ ತಾಲೂಕು ಘಟಕ ನಡೆಸುತ್ತಿರುವ ಅಭಿಯಾನ ಅತ್ಯಂತ ಮಹತ್ವದ್ದಾಗಿದೆ ಮತ್ತು ಶ್ಲಾಘನೀಯ ಕೆಲಸ ಎಂದರು. ಶಾಸಕರ ನೆಲೆಯಲ್ಲಿ […]