ಮಣಿಪಾಲ: ಅಪ್ಲಾಸ್ಟಿಕ್ ಅನೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನಿಗೆ 20ಲಕ್ಷ ರೂ. ನೆರವು

ಮಣಿಪಾಲ: ಅಪ್ಲಾಸ್ಟಿಕ್ ಅನೀಮಿಯಾದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೆ ಪರಿಹಾರ ವಾಗಿತ್ತು. ಇದಕ್ಕೆ ಸುಮಾರು 20 ರಿಂದ 20 ಲಕ್ಷ ಖರ್ಚು ಹಾಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು. ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು ಭರಿಸುವುದು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ನೇತೃತ್ವವಹಿಸಿದ್ದ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಜಿ ವಿಭಾಗದ ಮುಖ್ಯಸ್ಥರಾದ ಡಾ ವಾಸುದೇವ್ ಭಟ್ ತಂಡದವರು ಹೋಂ ಡಾಕ್ಟರ್ ಫೌಂಡೇಶನ್ ನ ನೇತೃತ್ವ […]

ಭಾರೀ ಮಳೆಯಿಂದ ಆತ್ರಾಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ಅವಾಂತರ ಸೃಷ್ಟಿ

ಉಡುಪಿ: ಉಡುಪಿ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ ನೆರೆ ಬಂದಿದ್ದು ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನುಗ್ಗಿದೆ. ಅವ್ಯವಸ್ಥೆ ಜೊತೆಗೆ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಈ ಘಟನೆ ಸಂಭವಿಸಿದ್ದು, ಮನೆಯ ಒಳಗೆಲ್ಲ ನೀರು ತುಂಬಿಕೊಂಡಿದ್ದರಿಂದ ಮನೆಯವರು ಒದ್ದಾಡುವಂತಾಗಿದೆ. ಹೆದ್ದಾರಿ ಕಾಮಗಾರಿ ಸಂದರ್ಭವೇ ಇಲ್ಲಿನ ನಿವಾಸಿಗಳು ಸಮರ್ಪಕ ಒಳಚರಂಡಿ ವ್ಯವಸ್ಥೆಗೆ ಒತ್ತಾಯಿಸುತ್ತಿದ್ದರು. ಆದರೆ ಹೆದ್ದಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಇಲ್ಲಿಯ ಜನರು ತೊಂದರೆ ಅನುಭವಿಸಬೇಕಾಗಿದೆ.

ಶಿರ್ವ ಪೇಟೆಯಲ್ಲೊಂದು ಅಮಾನವೀಯ ಘಟನೆ: ದ್ವಿಚಕ್ರ ವಾಹನಕ್ಕೆ ನಾಯಿಯನ್ನು ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ಕಾಪು ತಾಲೂಕಿನ ಶಿರ್ವಾದಲ್ಲಿ ನಡೆದಿದೆ. ಶ್ವಾನವನ್ನು ಸ್ಕೂಟರ್ ನ ಹಿಂಬದಿಗೆ ಕಟ್ಟಿಕೊಂಡು ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಯಿಯ ಕೊರಳಿಗೆ ಸರಪಳಿ ಹಾಕಿ ಸರಪಳಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಶಿರ್ವ ಪೇಟೆಯಲ್ಲಿ ಸುಮಾರು ದೂರ ಎಳೆದೊಯ್ದ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ವ್ಯಕ್ತಿಯ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ ಹಾಗೂ ಡಿಪ್ಲೋಮಾವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ […]

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕುಗಳಲ್ಲಿ 2024 ರ ಏಪ್ರಿಲ್ 1 ರಿಂದ ಪಡೆದ ಗರಿಷ್ಟ ಸಾಲ 65,000 ರೂ. ಗಳನ್ನು ಸಕಾಲದಲ್ಲಿ ಮರು ಪಾವತಿ ಮಾಡಿರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರಷ್ಟು ಬಡ್ಡಿಯ ಸಹಾಯಧನ 3625.00 ರೂ. ಗಳನ್ನು ನೀಡುವ ಯೋಜನೆಗೆ ಅರ್ಹ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ […]