ಎನ್.ಎಮ್.ಎಮ್.ಎಸ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ಎನ್.ಎಮ್.ಎಮ್.ಎಸ್ ಪರೀಕ್ಷೆ ಬರೆದು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವ ಹಾಗೂ ಹತ್ತನೇ ತರಗತಿ ಪ್ರಥಮ, ದ್ವಿತೀಯ ಪಿಯುಸಿಯಲ್ಲಿ ಸರ್ಕಾರಿ ಅನುದಾನಿತ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹಾಗೂ ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್‌ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿದ್ದು, ಈಗಾಗಲೇ ಓಟಿಆರ್ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಪಡೆದವರು ಫೇಸ್ ಅಥೇಂಟಿಕೇಶನ್ ಮಾಡಿಸಿ, ಆಗಸ್ಟ್ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. […]