ಕೊರಗ ಯುವಜನತೆಗೆ ಉದ್ಯೋಗ, ಹಕ್ಕುಪತ್ರಕ್ಕಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಳೆಯ ಮಧ್ಯೆಯೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊರಗ ಸಮುದಾಯದ ಮಕ್ಕಳು, ಮಹಿಳೆಯರು, ವೃದ್ಧರು ಧರಣಿ ನಡೆಸುತ್ತಿದ್ದು, ಅಲ್ಲೇ ಮಧ್ಯಾಹ್ನ, ರಾತ್ರಿಯ ಅಡುಗೆಯನ್ನು ತಯಾರಿಸಿ, ಊಟ ಮಾಡಿ ಧರಣಿಯನ್ನು ಮುಂದುವರೆಸಿದ್ದಾರೆ. ಸುಮಾರು 25 […]

ಮೋದಿ ಸರ್ಕಾರದ 3.0 ಬಜೆಟ್ ಮಂಡನೆ: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ನವದೆಹಲಿ: ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡನೆ ಮಾಡಿದ್ದು, ಬಜೆಟ್‌ನಲ್ಲಿ ಹಲವು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆ ಏರಿಳಿತ ಮಾಡಲಾಗಿದೆ. ಯಾವುದು ಅಗ್ಗ: ಯಾವುದು ದುಬಾರಿ: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೆಲವು ವಸ್ತುಗಳ ಸುಂಕದಲ್ಲಿ ಏರಿಳಿತ ಮಾಡುವ ಹೊತ್ತಲ್ಲಿ ಪರಿಸರ ಸ್ನೇಹಿ ನಿಲುವನ್ನು ಅನುಸರಿಸಿದೆ. ಅದರಲ್ಲೂ ಪರಿಸರಕ್ಕೆ ಮಾರಕವಾದ, ಮರು ಬಳಕೆ ಮಾಡಲು ಸಾಧ್ಯವೇ ಆಗದ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ ಮಾಡುವ […]

ಉಡುಪಿ: ಬಿ.ಆರ್. ಕಂಪೆನಿಯ ಆಸ್ಪತ್ರೆ ನಿರ್ಮಾಣಕ್ಕೆ ತೆಗೆದ ಗುಂಡಿ ಮುಚ್ಚುವಂತೆ ಆಗ್ರಹ

ಉಡುಪಿ: ಅರ್ಧಕ್ಕೆ ಸ್ಥಗಿತಗೊಂಡಿರುವ ಉಡುಪಿ ನಗರದ ಹೃದಯಭಾಗದ ಕೆ.ಎಂ.ಮಾರ್ಗದಲ್ಲಿರುವ ಬಿ.ಆರ್. ಕಂಪೆನಿಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ತೆಗೆದಿರುವ ಬಹೃತ್ ಗುಂಡಿಯನ್ನು ಮುಚ್ಚುವಂತೆ ಆಗ್ರಹಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಇಂದು ವಿನೂತನವಾದ ಅಪಾಯಕಾರಿ ಪ್ರತಿಭಟನೆ ನಡೆಸಿದರು. ಕ್ರೇನ್ ಮೂಲಕ ಮಳೆ ನೀರು ತುಂಬಿರುವ ಅಪಾಯಕಾರಿ ಗುಂಡಿಯ ನೀರಿನ ಮಟ್ಟದವರೆಗೆ ಇಳಿದ ಒಳಕಾಡು ಅವರು, ಎಚ್ಚರಿಕೆಯ ಫಲಕವನ್ನು ನೀರಿನಲ್ಲಿ ತೇಲಿಬಿಟ್ಟರು. ಉಡುಪಿ ನಾಗರಿಕ ಸಮಿತಿಯ ನೇತೃತ್ವದಲ್ಲಿ ಈ ವಿನೂತನ ಪ್ರತಿಭಟನೆ ನಡೆಯಿತು. ತಮಟೆ, ಎಚ್ಚರಿಕೆಯ […]

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಲೇವಡಿ ಮಾಡಿರುವ ಶಾಸಕ ಯಶಪಾಲ್ ಸುವರ್ಣ ಅವರು ಓರ್ವ ಮಹಿಳಾ ಸಚಿವೆಯ ಬಗ್ಗೆ ಮಾತನಾಡುವಾಗ ಯಾವ ಭಾಷೆ ಬಳಸಬೇಕು ಎನ್ನುವ ಕನಿಷ್ಠ ಜ್ಞಾನ ಕೂಡ ಇಲ್ಲ.

ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ ಹಾಗೂ ಇತರ ಭಾಗಗಳಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಸಮುದ್ರ ಕೊರೆತದ ತೀರ ಪ್ರದೇಶಗಳು, ನೆರೆ ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿ ಹಾಗೂ ಅಲ್ಲಿನ ಜನಜೀವನದ ಪರಿಸ್ಥಿತಿಯ ವೀಕ್ಷಣೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರವಾಸ ಕಾರ್ಯಕ್ರಮಗಳನ್ನು ‘ ಚಿಕ್ಕಿ ತಿಂದು ಹೋದ ಹಾಗೆ ಆಯಿತು ‘ ಎಂದು ಲೇವಡಿ ಮಾಡಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆ ರಾಜಕೀಯದಲ್ಲಿ ಅವರಿನ್ನೂ ಎಳಸು ಎನ್ನುವುದು ಎತ್ತಿ ತೋರಿಸುತ್ತದೆ. ಒರ್ವ […]

ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಲ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: […]