ನೀಲಾವರ ಗ್ರಾಮದ ಕಿಂಡಿ ಅಣೆಕಟ್ಟಿನ ಮೇಲೆ ಭಾರೀ ತ್ಯಾಜ್ಯ ಶೇಖರಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿದೆ. ಇದರ ಜೊತೆಗೆ ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ನೆರೆ ಇಳಿಯುತ್ತಿದ್ದಂತೆ ಆಗಿರುವ ಒಂದೊಂದೇ ಅವಾಂತರಗಳು ತೆರೆದುಕೊಳ್ಳುತ್ತಿದೆ. ಬ್ರಹ್ಮಾವರ ತಾಲೂಕಿನಲ್ಲಿ ಹರಿಯುವ ಸೀತಾ ನದಿ ನೀಲಾವರ ಗ್ರಾಮದ ಕಿಂಡಿ ಅಣೆಕಟ್ಟನ್ನು ಸಂಪೂರ್ಣ ಜಲಾವೃತ ಮಾಡಿತ್ತು. ನೆರೆ ನೀರು ಇಳಿಮುಖವಾಗುತ್ತಿದ್ದಂತೆ ಕಿಂಡಿ ಅಣೆಕಟ್ಟು ಮೇಲೆ ದೊಡ್ಡ ದೊಡ್ಡ ಮರದ ದಿಮ್ಮಿ, ಮರದ ರೆಂಬೆ ಕೊಂಬೆಗಳು ಕಸ ಪ್ಲಾಸ್ಟಿಕ್ ಇತ್ಯಾದಿಗಳು ಆವರಿಸಿಕೊಂಡು ಬಿಟ್ಟಿದೆ. ತ್ಯಾಜ್ಯ ನೀರು […]

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದರು.ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ […]

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸಭೆ: ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು. ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ […]

ಕುಂಜಾರುಗಿರಿ: ಭಯ ಹುಟ್ಟಿಸಿದ್ದ ಭಾರೀ ಗಾತ್ರದ ಚಿರತೆ ಸೆರೆ

ಉಡುಪಿ: ಕಾಪು ತಾಲೂಕಿನ ಕುಂಜಾರು ಗಿರಿ ಪರಿಸರದಲ್ಲಿ ರಾಶಿ ಹಾಕಿದ ಶಿಲೆ ಕಲ್ಲುಗಳ ಮಧ್ಯೆ ವಾಸವಾಗಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಕಾಪು ತಾಲೂಕಿನಾದ್ಯಂತ ಚಿರತೆ ಭಯ ಹುಟ್ಟಿಸಿತ್ತು‌‌. ಚಿರತೆಯ ಹಾವಳಿಯಿಂದ ಕುಂಜಾರು ಪರಿಸರದ ಗ್ರಾಮಸ್ಥರು ಭಯದಿಂದಲೇ ಓಡಾಟ ನಡೆಸುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ಅಲ್ಲದೆ, ಅಂಗನವಾಡಿಗಳಿಗೂ ರಜೆ ನೀಡಲಾಗಿತ್ತು. ರಾತ್ರಿ ಆಗುತ್ತಿದ್ದಂತೆ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯ ಪಡುತ್ತಿದ್ದರು‌. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ […]

ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್

ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜುದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿಮಾತನಾಡಿದರು. ನಾವು ಅನೇಕ ಸಂಕ್ರಮಣಕಾಲಘಟ್ಟವನ್ನು ದಾಟಿ ಬಂದಿದ್ದೆವೆ. ಪ್ರಸ್ತುತ ಸಮಾಜ‘ನಿರ್ಧರಿತ ಆರ್ಥಿಕತೆ’ ಯಿಂದ ಬದಲಾಗಿ ‘ಆರ್ಥಿಕತೆ ನಿರ್ಧರಿತ ಸಮಾಜ’ವಾಗಿ ಬದಲಾಗುತ್ತಿದೆ. ಇದರಿಂದಾಗಿ, ಪ್ರತಿಯೊಂದು ವಿಷಯವು ಹಣಕಾಸಿನ ಆಧಾರದ ಮೇಲೆ ನಿರ್ಧರಿತವಾಗುತ್ತಿದೆ. ಹಿಂದಿನತಲೆಮಾರಿನವರು ಒತ್ತಡ ರಹಿತ ನಿರಾಳತೆಯಜೀವನ ನಡೆಸಿದ್ದು, ಪ್ರಸ್ತುತ […]