ಉಡುಪಿ: ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಯ ದಂಪತಿಗಳು.

ಉಡುಪಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಗಳ ಮೂಲದ ದಂಪತಿಗಳಿಗೆ ಮಕ್ಕಳನ್ನು ದತ್ತು ನೀಡುವ ಆದೇಶ ಪ್ರತಿಯನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ದತ್ತು ನೀಡುವುದರಿಂದ ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಎಂದರು. ದತ್ತು ಪ್ರಕ್ರಿಯೆ ಕಾನೂನು […]

ತ್ರಿಶಾ ವಿದ್ಯಾ ಪಿಯು ಕಾಲೇಜು: ಕೆಸರಡೊಂಜಿ ದಿನ ಕಾರ್ಯಕ್ರಮ.

ಉಡುಪಿ: ವಿದ್ಯಾರ್ಥಿಗಳಲ್ಲಿ ಈ ನೆಲದ ಸತ್ವ ವಿಚಾರಗಳ ಅರಿವು ಮೂಡಿಸುವುದಕ್ಕೆ, ಕೃಷಿಯ ಬಗ್ಗೆ ಒಲವು ಹೆಚ್ಚಿಸುವುದಕ್ಕೆ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಕೆಸರಡೊಂಜಿ ದಿನ ಕಾರ್ಯಕ್ರಮವನ್ನು ಜುಲೈ 20 ರಂದು ಆಯೋಜಿಸಲಾಗಿತ್ತು. ಇಲ್ಲಿ ವಿದ್ಯಾರ್ಥಿಗಳು ಒಂದಷ್ಟು ಆಟಗಳ ಜೊತೆಗೆ ಈ ನೆಲದ ಕೃಷಿಯನ್ನು ಉಳಿಸುವುದರ ಕುರಿತಾದ ಮಹತ್ವವನ್ನು ಅರಿತರು. ಈ ಕಾರ್ಯಕ್ರಮದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿ ಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. […]

ಮಳೆಗಾಲದಲ್ಲಿ ಜೀವ ಹಾನಿ ಹಾಗೂ ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಮಾನವ ಜೀವ ಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್ ಮುಂಗಾರು ಮಳೆಯು ಆಗಸ್ಟ್ ಕೊನೆಯವರೆಗೂ ಬರಲಿದೆ, ನೆರೆ-ಪ್ರವಾಹವು […]

ಇಂದು (ಜು.25) ಕುಂದಾಪುರ, ಬೈಂದೂರು, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಪಾಠಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ( ಗುರುವಾರ) ರಂದು ಆಯಾ ತಾಲೂಕುಗಳ ತಹಶೀಲ್ದಾರ್ ಗಳು ರಜೆಯನ್ನು ಘೋಷಣೆ ಮಾಡಿದ್ದಾರೆ.