ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ (ಜು.31) ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜುಲೈ 31 ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಬೈಂದೂರು: ಬಾವಿಯಲ್ಲಿ ದಿಢೀರ್ ಮೊಸಳೆ ಪ್ರತ್ಯಕ್ಷ; ಬಿಚ್ಚಿಬಿದ್ದ ಸ್ಥಳೀಯರು
ಉಡುಪಿ: ಬೈಂದೂರು ತಾಲೂಕಿನ ನಾಗೂರಿನ ರತ್ನಾಕರ ಉಡುಪ ಎಂಬವರ ಬಾವಿಯಲ್ಲಿ ದಿಢೀರೆಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಇದನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಸ್ಥಳೀಯರು ಸೇರಿದ್ದರು. ಬೈಂದೂರು ತಹಶೀಲ್ದಾರ್ ಪ್ರದೀಪ್, ಠಾಣಾಧಿಕಾರಿ ಹಾಗೂ ಆರ್.ಎಫ್.ಓ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮೊಸಳೆ ಬಲೆಗೆ ಸಿಗದ ಕಾರಣ ಬೋನಿನಲ್ಲಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಪ್ರಯತ್ನ ಮುಂದುವರಿದೆ. ತೋಟದ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ಕಂಡು ಜನ ಆಶ್ಚರ್ಯಗೊಂಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ […]
ವಿನಯ್ ಕುಮಾರ್ ಸೊರಕೆ ಸತತ ಸೋಲಿನಿಂದ ಹತಾಶರಾಗಿದ್ದಾರೆ.
ಉಡುಪಿ: ಸತತ ಎರಡು ಬಾರಿಯ ಸೋಲಿನಿಂದ ವಿನಯ ಕುಮಾರ್ ಸೊರಕೆ ಕಂಗೆಟ್ಟಿದ್ದಾರೆ. ನಮ್ಮದೆ ಸರಕಾರ ಇದೆ, ನಾನು ಏನು ಆಗಿಲ್ಲ ಎಂಬ ಹತಾಶೆ ಅವರನ್ನು ಕಾಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಲೇವಡಿ ಮಾಡಿದರು. ಕಾಪು ಮಯೂರ ಹೋಟೆಲ್ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಆದರೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು ಎಂದು ಸೊರಕೆಗೆ ಟಾಂಗ್ ನೀಡಿದರು. ಆ ಪುಣ್ಯಾತ್ಮ ಸೊರಕೆ ರಾಜಕೀಯದಲ್ಲಿ ಇರಲಿ. […]
ತ್ರಿಶಾ ಸಂಸ್ಥೆ : ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಉಡುಪಿಯಲ್ಲಿ ಕೇದಾರ್ ನಾಯಕ್(309), ಎಸ್ ವೈಷ್ಣವಿ ಕಾಮತ್(270), ಶ್ರೀಲಕ್ಷ್ಮೀ ಶ್ರೀಧರ ಶೆಟ್ಟಿ(261), ನವ್ಯಾ ಎಸ್(254), ಅಭಿಷೇಕ್ ಹರಾಟೆ(233), ಸಮೃದ್ಧಿ ಪೈ ಎನ್(233), ಉತ್ಸವ್ ಕೆ ,ಜೆಸ್ವಿತಾ ಇರಾಲ್ ಡಿಸೋಜಾ, ರಿತೇಶ್ ಭಟ್, ಪನ್ನಗ ಜೈನ್, ಸುಕೇತ ಕೆ ಆಚಾರ್ಯ , ಫರ್ನಾಂಡಿಸ್ ಫ್ಲೇವಿಯನ್ ಕಾಸ್ಮಾ, ಆಸಿಯಾ, ಗಣೇಶ್, ಯಮುನಪ್ಪ, ಅರ್ಜುನ್ ಆರ್ […]
ಶಿರಾಡಿ ಘಾಟ್ನಲ್ಲಿ ಭಾರೀ ಭೂಕುಸಿತ: ಮಣ್ಣಿನಡಿ ಸಿಲುಕಿದ ಹಲವು ವಾಹನಗಳು, ವಾಹನ ಸಂಚಾರ ಸಂಪೂರ್ಣ ಸ್ಥಗಿತ.
ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ […]