ಆ. 1ರಿಂದ 11ರವರೆಗೆ ಉಡುಪಿಯಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ’
ಉಡುಪಿ: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆಗಸ್ಟ್ 1ರಿಂದ 11ರ ವರೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ- 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆಯೋಜನೆ ಹಾಗೂ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು. […]
ಉಡುಪಿ: ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು
ಉಡುಪಿ: ಬ್ರಹ್ಮಾವರ ತಾಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.
ಅಂಕೋಲ ಶಿರೂರು ಗುಡ್ಡ ಕುಸಿತ ದುರಂತ: ಇನ್ನೂ 9 ಶವಗಳು ಪತ್ತೆ ಆಗಬೇಕಿದೆ.
ಅಂಕೋಲ: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈಗಾಗಲೇ 8 ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಮೂವರ ಪತ್ತೆಗಾಗಿ ಕಳೆದ 15ದಿನಗಳಿಂದ ಹುಟುಕಾಟ ನಡೆಸಿದ್ದಾರೆ. ಇನ್ನು ಈ ದುರಂತ ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಭೇಟಿ ನೀಡಿ, 17 ಮೃತದೇಹ ಇವೆ. ಸದ್ಯ 8 ಮೃತದೇಹಗಳು ಪತ್ತೆ ಯಾಗಿವೆ. ಇನ್ನೂ 9 ಶವಗಳು ಪತ್ತೆ ಆಗಬೇಕಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. […]
ಪರಿಸರ ಮಾಲಿನ್ಯವಾದರೆ ಸೂಕ್ತ ಕಾನೂನು ಕ್ರಮ: ನಂದಿಕೂರು ಎಂ11 ಕಂಪನಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ಉಡುಪಿ: ಪರಿಸರ ಅಧಿಕಾರಿಗಳ ಪರೀಕ್ಷಾ ವರದಿಗನುಗುಣವಾಗಿ ಅವರ ಸೂಚನೆಯನ್ನು ಕಂಪನಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಂಪನಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು, ನಂದಿಕೂರಿನಲ್ಲಿ ಕಾರ್ಯಚರಿಸುತ್ತಿರುವ ಎಂ.11 ಕಂಪನಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ದೂರಿನನ್ವಯ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಹಿತ ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಸೇರಿಸಿಕೊಂಡು ಎಂ11 ಕಂಪನಿಯೊಳಗೆ ಪರೀಶಿಲನೆ ನಡೆಸಿ ಬಳಿಕ ಕಂಪನಿಯ ಹಾಲ್ ವೊಂದರಲ್ಲಿ ತುರ್ತು ಸಭೆ ನಡೆಸಿ ಮಾತನಾಡಿದರು. ಅಡುಗೆ ಎಣ್ಣೆಯನ್ನು […]
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ: ಕಾರ್ಕಳ ಮಿಯ್ಯಾರು ಗ್ರಾಮದಲ್ಲಿ ಕೆಸರಾಟ ಪಾಠ ಕಾರ್ಯಕ್ರಮ.
ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ ರೇಂಜರ್ಸ್ ಘಟಕದ ವತಿಯಿಂದ ಕಾರ್ಕಳದ ಮಿಯ್ಯಾರು ಗ್ರಾಮದಲ್ಲಿ ‘ಕೆಸರಾಟ ಪಾಠ’ ಕಾರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮಿಯ್ಯಾರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಾಧವ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಿಯ್ಯಾರು ಗ್ರಾಮಕ್ಕೂ ಎನ್‌ಎಸ್‌ಎಸ್ ಚಟುವಟಿಕೆಗಳಿಗೂಅವಿನಾಭಾವ ನಂಟಿದೆ. ಈ ಗ್ರಾಮದಲ್ಲಿ ಹೆಚ್ಚಿನ ಎನ್ ಎಸ್ ಎಸ್ ಕ್ಯಾಂಪ್‌ಗಳು ನಡೆಯುತ್ತವೆ. ಈ ಕಾರ‍್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಜೀವನ ಪಾಠ ಲಭಿಸಲಿ ಎಂದು ಹಾರೈಸಿದರು. ಆಳ್ವಾಸ್ ವಿದ್ಯಾ ಸಂಸ್ಥೆಯ ಟ್ರಸ್ಟಿ ವಿವೇಕ್ […]