ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭಾರೀ ಭೂಕುಸಿತ: ವಾಹನ ಸಂಚಾರ ಸ್ಥಗಿತ, ಈ ಮಾರ್ಗದಲ್ಲಿ ಸಂಚರಿಸಿ..!

ಹಾಸನ: ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ, ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್​ನಲ್ಲಿ ಘಟನೆ ನಡೆದಿದೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಸಂಜೆ ವೇಳೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.ಸಂಚರಿಸುವ ಮಾರ್ಗ:ಮಂಗಳೂರು – ಬೆಂಗಳೂರು […]

ನಾಳೆ (ಆಗಸ್ಟ್ 1) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

ಭಾರೀ ಮಳೆ ಹಿನ್ನಲೆ, ನಾಳೆ (ಅಗಸ್ಟ್ 1) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಅಗಸ್ಟ್ 1) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಬೈಂದೂರು: ಬಾವಿಯಲ್ಲಿ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಬೃಹತ್ ಗಾತ್ರದ ಮೊಸಳೆ ಕೊನೆಗೂ ಸೆರೆ

ಉಡುಪಿ: ಬೈಂದೂರು ತಾಲೂಕಿನ ನಾಗೂರಿನಲ್ಲಿ ಬಾವಿಯೊಂದರಲ್ಲಿ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಬೃಹತ್ ಗಾತ್ರದ ಮೊಸಳೆ ಕೊನೆಗೂ ಸೆರೆ ಸಿಕ್ಕಿದೆ.ತೋಟದ ಬಾವಿಯಲ್ಲಿದ್ದ ಮೊಸಳೆ ಸೆರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು. ನಿನ್ನೆ ಇಡೀ ದಿನ ಮೊಸಳೆ ಹಿಡಿಯಲು ನಾನಾ ತಂತ್ರ ಉಪಯೋಗಿಸಿ ವಿಫಲಗೊಂಡಿದ್ದ ಇಲಾಖೆಗೆ ಇಂದು ಸ್ಥಳೀಯ ಮೀನುಗಾರರು ಸಾಥ್ ನೀಡಿದರು. ಇವತ್ತು ಇಲ್ಲಿನ ಮೀನುಗಾರ ಮಂಜು ಖಾರ್ವಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೊಸಳೆಯನ್ನು ಬಲೆಗೆ ಕೆಡವಲಾಯಿತು. ಬಲೆ ಇನ್ನಿತರ ಪರಿಕರ ಬಳಸಿ ಮೀನುಗಾರರು ಮೊಸಳೆಯನ್ನು ಸೆರೆ […]

10 ದಿನಕ್ಕೆ ಕಾಲಿಟ್ಟ ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ; ಸ್ಪೀಕರ್ ಯು.ಟಿ. ಖಾದರ್ ಭೇಟಿ

ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 10 ದಿನಕ್ಕೆ ಕಾಲಿಟ್ಟಿದೆ. ಇಂದು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು, ಧರಣಿ ನಿರತರ ಬೇಡಿಕೆಗಳ ಮನವಿ ಸ್ವೀಕರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಕೊರಗ ಸಮುದಾಯದ ಯುವಜನತೆಗೆ ಸರಕಾರಿ […]