ಮಂಗಳೂರು-ಮಣಿಪಾಲದ ಅತಿದೊಡ್ಡ MNC ಕಂಪೆನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು
ವಯನಾಡು ಭೂಕುಸಿತ; ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್
ಉಡುಪಿ: ಕೇರಳ ವಯನಾಡು ಭೂಕುಸಿತಕ್ಕೆ ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು, ಈ ರೀತಿ ಕೂಡ ಪ್ರಕೃತಿ ಮುನಿಸಿಕೊಳ್ಳುತ್ತಾ ಎಂದು ಅಚ್ಚರಿ ವ್ಯಕ್ತಪಡಿಸಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೀವಮಾನದಲ್ಲೇ ಪ್ರಥಮ ಬಾರಿಗೆ ಇಂಥ ದುರ್ಘಟನೆ ನೋಡಿದ್ದೇನೆ. ನನಗೆ ಅತ್ಯಂತ ನೋವಾಗಿದೆ. ಪ್ರಕೃತಿ ವಿಕೋಪ ದೇವರ ಸೃಷ್ಟಿ, ಅದನ್ನು ತಡೆಯಲು ನಮಗೆ ಸಾಧ್ಯವಿಲ್ಲ. ಜನರು ಪ್ರಯತ್ನ ಪಟ್ಟರೆ ಇಂತಹ ದುರ್ಘಟನೆಗಳನ್ನು ತಡೆಗಟ್ಟಬಹುದು ಎಂದರು. ಮಾನವರ ತಪ್ಪಿನಿಂದ ಆಗುವ ದುರ್ಘಟನೆಗಳನ್ನು ತಪ್ಪಿಸಬಹುದು. ಈ […]
ಉಡುಪಿ: ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ನಿರಂತರ ಹಗರಣಗಳ ಸರದಾರ ಎಂಬ ಬಿರುದನ್ನು ಸಿದ್ದರಾಮಯ್ಯ […]
ಸಿಎ ಫೌಂಡೇಶನ್ ಪರೀಕ್ಷೆ: ಆಳ್ವಾಸ್ ಕಾಲೇಜಿನ 1೦೦ ವಿದ್ಯಾರ್ಥಿಗಳು ಉತ್ತೀರ್ಣ
ವಿದ್ಯಾಗಿರಿ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳುಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ. ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇಕಡಾ 14.96%ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಶೇಕಡ 68.೦3 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 147 ವಿದ್ಯಾರ್ಥಿಗಳಲ್ಲಿ 1೦೦ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ 42 ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, 3೦ ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಿಎಯ […]
ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು: ಆಂಬ್ಯುಲೆನ್ಸ್’ನಂತೆ ಬಸ್ ನಲ್ಲಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಜೀವ ಉಳಿಸಿದ ಚಾಲಕ-ನಿರ್ವಾಹಕ.
ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅಂಬ್ಯುಲೆನ್ಸ್’ನಂತೆ ಬಸ್ ನಲ್ಲಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13 ಎಫ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ಹೃದಯಾಘಾತದ ಲಕ್ಷಣಗಳು ಕಾಣಿಸಿದ್ದು, ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದ್ದಾರೆ. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಆನ್ ಮಾಡಿ ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ […]