ಮಣಿಪಾಲ MSDC ಓರೆನ್ ಇಂಟರ್ನ್ಯಾಷನಲ್ ನಲ್ಲಿ “ಡಿಪ್ಲೋಮೋ ಇನ್ ಕಾಸ್ಮೆಟಾಲಜಿ” ಕೋರ್ಸ್.
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೆನ್ ಇಂಟರ್ನ್ಯಾಷನಲ್ ನಲ್ಲಿ ವಿದ್ಯಾರ್ಥಿಗಳಿಗೆ “ಡಿಪ್ಲೋಮೋ ಇನ್ ಕಾಸ್ಮೆಟಾಲಜಿ” (DIPLOMA IN COSMETOLOGY) ಅಲ್ಪಾವಧಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೀವನೋಪಾಯವನ್ನು ಭದ್ರಪಡಿಸಿಕೊಳ್ಳಲು ಸಹಾಯ:MSDCಯು ಯುವಕ ಯುವತಿಯರಿಗೆ ಉತ್ತಮ ಜೀವನೋಪಾಯವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡುವ ಉದ್ಯಮ ಸಂಬಂಧಿತ ವಿವಿಧ ಕೌಶಲ್ಯ ತರಬೇತಿಗಳನ್ನು ತೆಗೆದುಕೊಳ್ಳಲು, ಯುವಕರನ್ನು ಸಕ್ರಿಯಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡುತ್ತಿದೆ. ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ:◼️ ಚರ್ಮ (Skin)◼️ ಕೂದಲು (Hair)◼️ಮೇಕಪ್ (Makeup)◼️ನೈಲ್ ಆರ್ಟ್ ಮತ್ತು ಎಕ್ಸ್‌ಟೆನ್ಶನ್ […]
ಕೇರಳ ವಯನಾಡ್ ಭಾರೀ ಭೂಕುಸಿತ ದುರಂತ: ಸಾವಿನ ಸಂಖ್ಯೆ 150 ಏರಿಕೆ, 191 ಮಂದಿ ಆಸ್ಪತ್ರೆ ದಾಖಲು, ಹಲವರ ಸ್ಥಿತಿ ಚಿಂತಾಜನಕ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.
ಕೇರಳ, ಜು.31: ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 151 ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಈ ಪೈಕಿ 67 ಮೃತದೇಹಗಳ ಗುರುತು ಪತ್ತೆಯಾಗಿದೆ. 191 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 3069 ಮಂದಿ ವಿವಿಧ ಸಾಂತ್ವನ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಮಣ್ಣು, ಮರದ ದಿಮ್ಮಿಗಳಡಿಯಲ್ಲಿ ಛಿದ್ರಗೊಂಡಿರುವ ಮೃತದೇಹಗಳು ಪತ್ತೆಯಾಗತೊಡಗಿದೆ.ಬುಧವಾರ ಬೆಳಗ್ಗೆ ಮತ್ತೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು ,ನಾಲ್ಕು ತಂಡಗಳಾಗಿ 150 […]
ಕುಂದಾಪುರ: ಬೀಜಾಡಿ ಬೀಚ್ ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ.
ಉಡುಪಿ: ಕುಂದಾಪುರ ತಾಲೂಕಿನ ಬೀಜಾಡಿ ಬೀಚ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.30ರಿಂದ 35 ಅಸುಪಾಸಿನ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೆ ಈ ಕೆಳಗಿನ ಮೊಬೈಲ್ ಸಂಖ್ಯೆ 08254230338 ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು
ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ […]
ಇಂದು (ಜುಲೈ 31) ಉಡುಪಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಉಡುಪಿ, ಕಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31 (ಬುಧವಾರ) ರಂದು ರಜೆ ಘೋಷಿಸಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.