ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ […]

ಯಶಸ್ಸು ಕಂಡ ‘ವಿನಮಿತ’ ಹಳೆಯ ವಿದ್ಯಾರ್ಥಿ ಸಂಘದ ಪುನರ್ಮಿಲನ.

ಕೊಚ್ಚಿ: ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆಯ ವಿದ್ಯಾರ್ಥಿಗಳ ಸಂಘವಾದ ‘ವಿನಮಿತ’ವು ಜುಲೈ 27ರಂದು ಹಳೆಯ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ‘REU_NITTE 24’ ಎಂಬ ಮಹತ್ವದ ಪುನರ್ಮಿಲನವನ್ನು ಕೊಚ್ಚಿಯ ಚಕೋಲಾಸ್ ಪೆವಿಲಿಯನ್ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮವು ಗೌರವಾನ್ವಿತ ಅತಿಥಿಗಳ ಉಪಸ್ಥಿತಿಯಲ್ಲಿ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ನೆಲೆಸಿರುವ ನಿಟ್ಟೆಯ ತಾಂತ್ರಿಕ ಕಾಲೇಜಿನ ಹಳೆವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡರು. ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ ಸ್ಪೂರ್ತಿದಾಯಕ ದಿಕ್ಸೂಚಿ ಭಾಷಣ ಮಾಡಿ, ನಾವು ವಿದ್ಯಾರ್ಜನೆ ಮಾಡಿದ […]

ಪೆರ್ಡೂರು: ವ್ಯಕ್ತಿ ನಾಪತ್ತೆ

ಉಡುಪಿ: ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಎಂಬ ವ್ಯಕ್ತಿಯು ಜುಲೈ 15 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಕಳ: ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ.

ಕಾರ್ಕಳ: ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಅಲ್ಲದೆ ಮಾನಸಿನ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ. ಸಂಬಂಧಿಕರು ಪತ್ತೆಯಾಗದ ಕಾರಣ ಯುವಕ ಬೀದಿ ಪಾಲಾಗಿ ಬದುಕು ಸಂಕಷ್ಟಕ್ಕೀಡಾಗಲಿದೆ ಎಂದು ಅರಿತ ಸಮಾಜ ಸೇವಕ ವಿಶು ಶೆಟ್ಟಿ ಅವರು, ಹೊಸಬೆಳಕು ಆಶ್ರಮದ ಮುಖ್ಯಸ್ಥೆ ತನುಲಾ ಅವರನ್ನು ಸಂಪರ್ಕಿಸಿ, ಯುವಕನಿಗೆ ಆಶ್ರಯ […]

ಕಾರ್ಕಳ ವರ್ಧಮಾನ ವಿದ್ಯಾಸಂಸ್ಥೆಯಲ್ಲಿ ಬನ್ನಿಸ್ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಉದ್ಘಾಟನೆ.

ಕಾರ್ಕಳ: ಭಾರತೀಯರಾದ ನಾವು ಸೇವೆಯೇ ಪರಮ ಧರ್ಮವೆಂಬ ತತ್ವವನ್ನು ಸ್ವೀಕಾರ ಮಾಡಿ ಬಾಳುವವರು. ಇಂತಹ ಸೇವಾ ಮನೋಭಾವ ಗುಣಗಳನ್ನು ವಿದ್ಯಾರ್ಥಿಗಳಿಗೆ ಎಳವೆಯಿಂದಲೇ ಶಿಕ್ಷಕರ ಕಲಿಸಿಬೇಕಿದೆ. ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣವಾಗಿದೆ. ಇಂತಹ ಸದ್ಗುಣಗಳಿಗೆ ವ್ಯಕ್ತಿತ್ವ ವಿಕಸನಗಳಿಗೆ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಂಸ್ಥೆ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ ಅವರು ಹೇಳಿದರು. ಅವರು ಕಾರ್ಕಳದ ವರ್ಧಮಾನ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ, ಸಾಣೂರು ಇಲ್ಲಿ ಜರಗಿದ […]