ಉಡುಪಿ: ಮುಸುಕುಧಾರಿಗಳ ಗುಂಪೊಂದು ರಾಡ್ ಗಳನ್ನು ಹಿಡಿದು ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನ: ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ.

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ಆ.1 ರಂದು ಮುಂಜಾನೆ ನಾಲ್ವರು ಮುಸುಕುಧಾರಿಗಳ ಗುಂಪೊಂದು ನಗರದ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದಕ್ಕೆ ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ವಾಪಸ್ಸಾಗಿರುವ ಘಟನೆ ನಡೆದಿದ್ದು, ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ನಾಲ್ವರು ಕೂಡಾ ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲ್ಯಾಟ್ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು […]

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -3 ಯು ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಿಂದ 9 ರವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. […]

ಯುವನಿಧಿ ಯೋಜನೆಗೆ ಅರ್ಹ ಯುವಜನರನ್ನು ಫಲಾನುಭವಿಗಳಾನ್ನಾಗಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಯುವನಿಧಿ ಯೋಜನೆಯ ಬಗ್ಗೆಹೆಚ್ಚು ಪ್ರಚಾರಪಡಿಸುವುದರೊಂದಿಗೆ ನಿರುದ್ಯೋಗ ಹೊಂದಿದ ಯುವಜನರು ಇದರ ಫಲಾನುಭವಿ ಗಳನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅನುಷ್ಠಾನ ಹಾಗೂ ಐ.ಟಿ.ಐ ಪ್ರವೇಶಾತಿ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡುತ್ತಿದ್ದರು. ಸರಕಾರ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಾದ ಅರ್ಹ […]

ಉಡುಪಿ: ಶ್ರೀಮತಿ ಉಷಾಗೆ ಪಿ.ಹೆಚ್.ಡಿ. ಪದವಿ

ಉಡುಪಿ: ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಉಷಾ ಇವರಿಗೆ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ರ್ಟೀಟ್, ಮಂಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಾಲ್ಟರ್ ಡಿಸೋಜ ಇವರ ಮಾರ್ಗದರ್ಶನದಲ್ಲಿ ಇಂಪ್ಯಾಕ್ಟ್ ಆಫ್ ಜಿಎಸ್‌ಟಿ(ಗೂಡ್ಸ್ ಆಂಡ್ ಸರ್ವೀಸಸ್ ಟ್ಯಾಕ್ಸ್) ಆನ್ ಎಂಎಸ್‌ಎಂಇ ಸೆಕ್ಟರ್ ಎಂಬ ವಿಷಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಶ್ರೀಮತಿ ಉಷಾ ಇವರು ಶ್ರೀ ರಾಮಪೂಜಾರಿ, ಶ್ರೀಮತಿ ಸುಮತಿ […]

ಬೀಚ್‌ಗಳ ಸಮಗ್ರ ಅಭಿವೃದ್ಧಿಯ ವಿಸ್ತೃತ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ:ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ಬೀಚ್‌ಗಳ ಸಮಗ್ರಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಡಲತೀರಗಳಿಗೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೀಚ್‌ಗಳ ಸ್ಥಳೀಯ ಭೌಗೋಳಿಕ ಪ್ರದೇಶದ ಮಾಹಿತಿ ಕೊರತೆಯಿಂದ ಜೀವಹಾನಿಗಳು ಉಂಟಾಗುತ್ತವೆ. ಈ ಬಗ್ಗೆ ಪ್ರವಾಸಿಗರಿಗೆ […]