ಉಡುಪಿ:ಪಿ.ಜಿ.ಸಿ.ಇ.ಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದವತಿಯಿಂದ ಎಂ.ಬಿ.ಎ ಮತ್ತು ಎಂ.ಸಿ.ಎ ಕೋರ್ಸುಗಳಿಗೆ ಪಿ.ಜಿ.ಸಿ.ಇ.ಟಿ ಪರೀಕ್ಷೆಯು ಆಗಸ್ಟ್ 4 ರಂದು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗ್ಟಟ್ಟುವ ನಿಟ್ಟಿನಲ್ಲಿನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144(1) ರಂತೆ ನಿಷೇಧಾಜ್ಞೆಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿಆದೇಶಿಸಿರುತ್ತಾರೆ.
(MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ: ಕ್ಯಾಡ್ (CCDD) ಸೆಂಟರ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ
ಮಣಿಪಾಲ: (MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಕ್ಯಾಡ್ (CCDD) ಸೆಂಟರ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯ ಮೂಲಕ ತಮ್ಮ ವೃತ್ತಿಜೀವನವನ್ನು ನಿರ್ಮಿಸಿಕೊಳ್ಳಲು ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರವು ಸಹಾಯ ಮಾಡಲಿದೆ. 🔸ಉದ್ಯಮ ನಿರ್ದಿಷ್ಟ, ಕೌಶಲ್ಯ ಆಧಾರಿತ ಕೋರ್ಸ್ ಅನ್ನು ಕೊನೆಗೊಳಿಸಲು ಪ್ರಾರಂಭಿಸಿ.🔸ವಿಶ್ವ ದರ್ಜೆಯ ಕೋರ್ಸ್ ಉಲ್ಲೇಖ ಮಾರ್ಗದರ್ಶಿಗಳು.🔸ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಪ್ರಮಾಣಪತ್ರಗಳು.🔸 ಹೆಚ್ಚಿನ ಉದ್ಯಮದ ಅಗತ್ಯತೆಗಳೊಂದಿಗೆ ಪಠ್ಯಕ್ರಮವನ್ನು ಪರಿಚಯಿಸಲಾಗಿದೆ. ಇಲ್ಲಿ ಕೊಡುವ ಕೋರ್ಸ್:🔸ಆಟೋಕ್ಯಾಡ್🔸ಸ್ಕೆಚ್ಅಪ್🔸ರೀವಿಟ್🔸ರೀವಿಟ್ ಎಂಇಪಿ ವಿದ್ಯಾರ್ಥಿಗಳಿಗೆ ಒಂದರಿಂದ […]
ಮೂಡುಬಿದಿರೆ: ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ
ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನುಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು.ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕಾರ‍್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲುಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿಮೌಲ್ಯಯುತವಾದ ಕೌಶಲ್ಯಗಳನ್ನುಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ,ರಂಗಭೂಮಿ ಇತ್ಯಾದಿಗಳನ್ನು […]
ಮಂಗಳೂರು: ಕಾಲೇಜಿನ ಎದುರು ವಿದ್ಯಾರ್ಥಿಗಳ ಹೊಡೆದಾಟ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್..
ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.