ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 37 ವರ್ಷ ಜೈಲುಶಿಕ್ಷೆ
ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿದೆ. 2022ರಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕೋಟ ನಿವಾಸಿ ಸಚಿನ್ ಪೂಜಾರಿ(26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದು, ಆಕೆಯಿಂದ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡು ಮೊಬೈಲ್‌ನಲ್ಲಿ […]
ಪರಶುರಾಮ ಥೀಮ್ ಪಾರ್ಕ್ ವಿವಾದ: ತನಿಖೆ ಚುರುಕುಗೊಳಿಸಿದ ಕಾರ್ಕಳ ಪೊಲೀಸರು
ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಬೆಂಗಳೂರಿನ ಗೋಡೌನ್‌ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡವು ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸ್ಥಳ ಮಹಜರು ನಡೆಸಿದೆ. ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ಪ್ರತಿಮೆಗೆ ಬೇಕಾದ ವಸ್ತುಗಳು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಪರಿಶೀಲನೆ ನಡೆಸಲಾಗಿದೆ.ಪರಶುರಾಮ ಮೂರ್ತಿ ನಿರ್ಮಾಣದ ಬಗ್ಗೆ ವಿವಾದ ಕೇಳಿ ಬಂದ ಹಿನ್ನೆಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಾರ್ಕಳ ಟೌನ್ ಪೊಲೀಸರು ಈ […]
ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಆಗಸ್ಟ್ 20 ರಂದು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 26 ರಂದು ಸಂಭ್ರಮ ಹಾಗೂ ವಿಜೃಂಭಣೆಯಿಂದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶ್ರೀಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]
ಬೇಕಾಗಿದ್ದಾರೆ.
ಉಡುಪಿ: ಮಂಗಳೂರು-ಮಣಿಪಾಲದ ಅತಿದೊಡ್ಡ MNC ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
ಕುಂದಾಪುರ: ಕುಡಿದ ಮತ್ತಿನಲ್ಲಿ ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹಲ್ಲೆ ನಡೆಸಿ ವಿಚಿತ್ರವಾಗಿ ವರ್ತಿಸುತ್ತಿದ ಪತಿಯ ಬಂಧನ.
ಕುಂದಾಪುರ: ತಾಲೂಕಿನ ಬಸ್ರೂರಿನಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಮನೆಯ ಬಾಗಿಲು ಲಾಕ್ ಮಾಡಿಕೊಂಡು ಪತ್ನಿಗೆ ಹಲ್ಲೆ ಮಾಡಿ ಹುಟ್ಟಾಟವಾಡುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟಿದ್ದು, ಕೊನೆಗೂ ವ್ಯಕ್ತಿಯನ್ನು ಸೆರೆಹಿಡಿದು ಬಂಧಿಸಲಾಗಿದೆ. ಪತ್ನಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಅನಿತಾ (38) ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಲಕ್ಷ್ಮಣ (40) ಎಂಬಾತನನ್ನು ಬಂಧಿಸಲಾಗಿದೆ. ಬಸ್ರೂರಿನ ರೆಸಿಡೆನ್ಶಿಯಲ್ ಬ್ಲಾಕ್ʼನ ಬಾಡಿಗೆ ಮನೆಯಲ್ಲಿ ಅನಿತಾ – ಲಕ್ಷ್ಮಣ […]