ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕವಾಗಿ ಪ್ರತಿಷತಃ ನೂರರಷ್ಟು ಅನುಷ್ಠಾನಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಪ್ರತಿಷತಃ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರ […]
ಉಡುಪಿ: ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ಔಷಧೀಯ ಕಷಾಯ ವಿತರಣೆ.
ಉಡುಪಿ: ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ದೀವಿಗೆ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಹಾಲೆ ಮರದ ತೊಗಟೆಯ ಔಷಧೀಯ ಕಷಾಯ ವಿತರಣೆ ಕಾರ್ಯಕ್ರಮವು ವಿಪ್ರಶ್ರೀ ಕಲಾಭವನಲ್ಲಿ ದಿನಾಂಕ ಆ. 04 ರಂದು ನಡೆಯಿತು. ಆಯುರ್ವೇದ ಹಾಗೂ ಪಂಚಕರ್ಮ ವೈದ್ಯರಾದ ಡಾ.ಸುದರ್ಶನ್ ಭಟ್ ಭಾಗವಹಿಸಿ ಆಟಿ ಅಮಾವಾಸ್ಯೆ ಯ ಬಗ್ಗೆ, ಹಾಲೆ ಮರದ ಔಷಧೀಯ ಗುಣಗಳ ಬಗ್ಗೆ ಮತ್ತು ಅದರ ಕಷಾಯ ಸೇವನೆಯ ವೈಜ್ಞಾನಿಕ ಹಿನ್ನಲೆ ಬಗ್ಗೆ ಮಾಹಿತಿ ನೀಡಿದರು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಸುರೇಂದ್ರ ಉಪಾಧ್ಯಾಯ, ಕಾರ್ಯಾಧ್ಯಕ್ಷ ಶ್ರೀನಿವಾಸ […]
ಉಡುಪಿ: ಟೀಮ್ ನೆಷನ್ ಫಸ್ಟ್(ರಿ) ವತಿಯಿಂದ ರಕ್ತದಾನ ಶಿಬಿರ.
ಉಡುಪಿ: ಟೀಮ್ ನೆಷನ್ ಫಸ್ಟ್(ರಿ) ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ಆಗಸ್ಟ 3ರಂದು ನಡೆಯಿತು. ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಟೀಮ್ ನೇಷನ್ ಫಸ್ಟ್ ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು ಆದರೆ ಒಬ್ಬ ಸಾಮಾನ್ಯ ಮನುಷ್ಯ ರಕ್ತದಾನದ ಮೂಲಕ ಒಬ್ಬರ ಜೀವವನ್ನು ಉಳಿಸಬಹುದು […]
ಕಟಪಾಡಿ:ತ್ರಿಶಾ ಕ್ಲಾಸಸ್ : ಸಿ ಎ ಫೌಂಡೇಶನ್ ಸಾಧಕರಿಗೆ ಸನ್ಮಾನ
ಕಟಪಾಡಿ :ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ತ್ರಿಶಾ ಕ್ಲಾಸಸ್ ಉಡುಪಿಯ ವತಿಯಿಂದ ಹೆತ್ತವರ ಉಪಸ್ಥಿತಿಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಆಗಸ್ಟ್ 3ರಂದು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುಂದಿನ ಅವರ ಭವಿಷ್ಯಕ್ಕೆ ಶುಭ ಹಾರೈಸಿದರು. ಗರಿಷ್ಠ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಿಸಲಾಯಿತು. ವಿದ್ಯಾರ್ಥಿಗಳು […]
ಮಣಿಪಾಲ: ಲಾಡ್ಜ್ ನಲ್ಲಿ ಬಲವಂತವಾಗಿ ಮಹಿಳೆಯಿಂದ ವೇಶ್ಯಾವಾಟಿಕೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ಮಣಿಪಾಲ: ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು, ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ […]